ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬಂದ ಸೋನಿಯಾ ಗಾಂಧಿ, ಪುತ್ರಿ ಪ್ರಿಯಾಂಕ ಗಾಂಧಿ ಸಾಥ್‌

ರಾಯ್‌ ಬರೇಲಿ: ಲೋಕಸಭಾ ಚುನಾವಣೆಯ ಬಳಿಕ ತಮ್ಮ ಲೋಕಸಭಾ ಕ್ಷೇತ್ರ ರಾಯ್‌ಬರೇಲಿಗೆ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕ ಗಾಂಧಿಯವರೊಂದಿಗೆ ಭೇಟಿ ನೀಡಿದ್ದಾರೆ.

ಅವರಿಂದು ಶಾಸಕರು ಮತ್ತು ಮಾಜಿ ಶಾಸಕರೊಂದಿಗೆ ಸಭೆ ನಡೆಸಲಿದ್ದು, ರಾಯ್‌ಬರೇಲಿಯ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಪಾಲ್ಗೊಳ್ಳಲಿದ್ದಾರೆ.

ಸೋನಿಯಾ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ಸಿಂಗ್‌ ಅವರ ವಿರುದ್ಧ ಸುಮಾರು 1.67 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಉತ್ತರ ಪ್ರದೇಶದಲ್ಲಿ ಸೋನಿಯಾ ಗಾಂಧಿಯವರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಪಕ್ಷಕ್ಕೆ ಅನುಗ್ರಹ ಸಿಕ್ಕಿದಂತಾಗಿದೆ.

ಇತ್ತ ಚುನಾವಣೆ ಬಳಿಕ ಪ್ರಿಯಾಂಕ ಗಾಂಧಿಗೂ ಕೂಡ ಇದು ಮೊದಲನೇ ಭೇಟಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತಾಗಿ ನಡೆಯಲಿರುವ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಅಧಿಕೃತ ವಿಪಕ್ಷದ ಮಾನ್ಯತೆಗೆ ಅಗತ್ಯವಿರುವ ಸೀಟುಗಳನ್ನು ಪಡೆಯಲು ಕೂಡ ವಿಫಲವಾದ ಕಾಂಗ್ರೆಸ್‌ ದೇಶಾದ್ಯಂತ ಕೇವಲ 52 ಸೀಟುಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮಾತ್ರ ಪಕ್ಷಕ್ಕೆ ಗೆಲುವು ದೊರಕಿತ್ತು. (ಏಜೆನ್ಸೀಸ್)

Leave a Reply

Your email address will not be published. Required fields are marked *