ಸೋನಿಯಾ, ರಾಹುಲ್ ಗಾಂಧಿ ಜೈಲಿಗೆ ಹೋಗುವುದು ಖಚಿತ: ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ

Sonia Rahul Gandhi
Published on

ಪಾಟ್ನಾ: ಆಗಾಗ ತಮ್ಮ ಹೇಳಿಕೆಗಳ ಮೂಲಕವೇ ದೇಶದ ಗಮನ ಸೆಳೆಯುವ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ, ಇದೀಗ ಇನ್ನೊಂದು ವಿಚಾರವನ್ನು ಹೇಳಿದ್ದು, ಕಾಂಗ್ರೆಸ್ ವರಿಷ್ಠರ ಭವಿಷ್ಯವನ್ನೂ ತಿಳಿಸಿದ್ದಾರೆ.

ಅರ್ಥಾತ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರೂ ನ್ಯಾಷನಲ್ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗುವುದು ಖಚಿತ ಎಂದು ಅವರು ಹೇಳಿದ್ದಾರೆ.

ಕಾನೂನು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸೋನಿಯಾ ಹಾಗೂ ರಾಹುಲ್ ಗಾಂಧಿ ಇಬ್ಬರೂ ಜಾಮೀನಿನ ಮೇಲೆ ಹೊರಗಿದ್ದಾರೆ. ನಾನು ರಾಹುಲ್ ಗಾಂಧಿ ಬಗ್ಗೆ ಬಹಳಷ್ಟು ವಿಚಾರಗಳನ್ನು ಹೇಳಿದ್ದೆ, ಆದರೆ ನನ್ನನ್ನು ಯಾರೂ ಜೈಲಿಗೆ ಕಳಿಸಿಲ್ಲ ಎಂದು ಮಾತಲ್ಲೇ ಕೆಣಕಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸುಬ್ರಮಣಿಯನ್ ಸ್ವಾಮಿಯೇ ಬಯಲಿಗೆ ಎಳೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net