ಹಬ್ಬದ ದಿನವೇ ಮನೆಗೆ ಮಗನ ಶವ; ಫಲಿಸಲಿಲ್ಲ 5 ದಿನಗಳ ಜೀವನ್ಮರಣ ಹೋರಾಟ..

Accident
Published on

ವಿಜಯನಗರ: ವಿಜಯದಶಮಿಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಎಲ್ಲ ಸಂಭ್ರಮವೂ ಅಪಘಾತವೊಂದಕ್ಕೆ ಬಲಿಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.

ಐದು ದಿನಗಳ ಹಿಂದೆ ಹೊಸಪೇಟೆಯಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತವೊಂದು ನಡೆದಿತ್ತು. ಈ ಅಪಘಾತದಲ್ಲಿ ಪವನ್ ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ನೀಲಕಂಠನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ನೀಲಕಂಠ ಇಂದು ಸಾವಿಗೀಡಾಗಿದ್ದಾನೆ. ಹಬ್ಬದ ದಿನವೇ ಮನೆಗೆ ಶವ ತರುವಂತಾಗಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು. ಪವನ್ ಬಿಕಾಂ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ, ನೀಲಕಂಠ ಐಟಿಐ ವಿದ್ಯಾರ್ಥಿಯಾಗಿದ್ದ. ಹೊಸಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net