More

  ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?

  ಬೆಂಗಳೂರು: ಬಾಲಕಿಯನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್​ಬಾಸ್​ ಒಟಿಟಿ ಸೀಸನ್​-1ರ ಸ್ಪರ್ಧಿ, ರೀಲ್ಸ್​ ಸ್ಟಾರ್​ ಸೋನು ಶ್ರೀನಿವಾಸ್​ ಗೌಡ ವಿರುದ್ಧ FIR ದಾಖಲಾಗಿದ್ದು, ಆಕೆಯನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ.

  ಮಾರ್ಚ್​ 25ರಂದು ಸೋನು ಶ್ರೀನಿವಾಸ್​ ಗೌಡ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

  ಇತ್ತ ಸೋನು ಗೌಡ ಬಾಲಕಿಯನ್ನು ದತ್ತು ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ಸಿಕ್ಕಿದ್ದು, ಬಾಲಕಿಯ ತಂದೆ ಹಾಗೂ ತಾಯಿಯನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯ (CWC) ವಿಚಾರಣೆ ನಡೆಸಲಿದೆ. ಮಗುವನ್ನು ಸೋನು ಗೌಡ ಅವರಿಗೆ ಕೊಟ್ಟಿದ್ದಕ್ಕೆ ನಿಖರ ಕಾರಣವನ್ನು ಅಧಿಕಾರಿಗಳು ಕೇಳಲಿದ್ದಾರೆ. ಹಣ ಪಡೆದು ಮಗುವನ್ನ ದತ್ತು ಕೊಟ್ಟಿದ್ದರೆ ಪೋಷಕರಿಗೂ ಸಂಕಷ್ಟ ಎದುರಾಗಲಿದೆ. ಒಂದು ವೇಳೆ ಹಣ ಪಡೆದಿರುವುದು ಪತ್ತೆಯಾದಲ್ಲಿ ಪೋಷಕರ ಮೇಲೂ ಕ್ರಮ ಜರುಗಲಿದೆ.

  Sonu Srinivas gowda 1

  ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಶಂಕಿತ ಧರಿಸಿದ್ದ ಕ್ಯಾಪ್​ನಿಂದ ಸಿಕ್ತು ಮಹತ್ವದ ಸುಳಿವು

  ಒಂದು ವೇಳೆ ಮಗುವನ್ನು ಬಡತನದಿಂದ ಹಣಕ್ಕಾಗಿ ನೀಡಿದ್ದಲ್ಲಿ ಅಧಿಕಾರಿಗಳು ಪೋಷಕರು ಹಾಗೂ ಮಗುವಿಗೆ ಕೌನ್ಸಿಲಿಂಗ್ ಮಾಡಲಿದ್ದಾರೆ. ಮಗುವಿನ ಭವಿಷ್ಯಕ್ಕೆ ಸರ್ಕಾರದಿಂದ ಅರ್ಥಿಕ ಸಹಾಯ ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುತ್ತದೆ. ಕಾನೂನು ಬಾಹಿರವಾಗಿ ದತ್ತು ಪಡೆದ ಬಗ್ಗೆ ವಿಚಾರಣೆ ಕೂಡಾ ನಡೆಯಲಿದೆ. ಬಾಲಕಿಯನ್ನ ರೀಲ್ಸ್ ಮಾಡಲು ಬಳಸಿಕೊಂಡ ಸಂಬಂಧ ವಿಚಾರಣೆ ನಡೆಸಲಿದ್ದಾರೆ.

  ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಹಿನ್ನೆಲೆ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ ಆಗಿದ್ದಾರೆ. ಹೆಣ್ಣು ಮಗುವನ್ನು ಅಕ್ರಮವಾಗಿ ದತ್ತು ಪಡೆದಿದ್ದ ಹಿನ್ನೆಲೆ ಸೋನು ಗೌಡರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಸೋನು ಗೌಡ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts