More

    ಪೌಷ್ಟಿಕಾಂಶಗಳ ಕೊರತೆಯಿಂದ ಅನೀಮಿಯಾ

    ಹೂವಿನಹಡಗಲಿ: ರಾಜ್ಯ ಅನೀಮಿಯಾ ಮುಕ್ತವಾಗಲು ಎಲ್ಲರೂ ಶ್ರಮಿಸಬೇಕು ಎಂದು ತಾಪಂ ಇಒ ಡಾ.ಜಯರಾಮ್ ಚವ್ಹಾಣ್ ಹೇಳಿದರು.
    ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಗುರುವಾರ ಹಮ್ಮಿಕೊಂಡಿದ್ದ ಅನೀಮಿಯಾ ಮುಕ್ತ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಅನೀಮಿಯಾ ಮುಕ್ತವಾಗಲು ಎಲ್ಲರೂ ಶ್ರಮಿಸಿ

    ಪೌಷ್ಟಿಕಾಂಶಗಳ ಕೊರತೆಯಿಂದ ಅನೀಮಿಯಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಸರ್ಕಾರ ಯಾವುದೆ ಮಗು ಪೌಷ್ಟಿಕಾಂಶದ ಕೊರತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದರು.

    ಇದನ್ನೂ ಓದಿ: ಎಸ್​ಐಟಿ ಪತ್ತೆ ಹಚ್ಚಬೇಕಿದೆ 200 ಕೋಟಿ ರೂಪಾಯಿ ಅಕ್ರಮ

    ತಾಲೂಕು ಆರೋಗ್ಯಾಧಿಕಾರಿ ಸ್ವಪ್ನ ಮಕ್ಕಳ ಹಿಮೋಗ್ಲೋಬಿನ್ ತಪಾಸಣೆ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಅಯ್ಯನಗೌಡರ ಕೊಟ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ರಾಮನಗೌಡ, ಕ್ಷೇತ್ರ ದೈಹಿಕ ಶಿಕ್ಷಣ ಅಧೀಕ್ಷಕ ಮುಸ್ತಫ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆನಂದ್ ಡೊಳ್ಳಿನ, ಆರೋಗ್ಯ ಇಲಾಖೆ ಸಿಬ್ಬಂದಿ ರಾಜೇಂದ್ರ, ವಿಶಾಲಾಕ್ಷಿ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts