ಶಿವಮೊಗ್ಗದಲ್ಲಿ ಹಾಸ್ಟೆಲ್​​​ ಅಡುಗೆ ಸಹಾಯಕಿ ಅನುಮಾನಸ್ಪದ ಸಾವು, ಪರಿಚಿತರೇ ಕೊಲೆ ಮಾಡಿರುವ ಶಂಕೆ

ಶಿವಮೊಗ್ಗ: ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಅಡುಗೆ ಸಹಾಯಕಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ತನ್ನ ಬಾಡಿಗೆ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

ಹಗರಿಬೊಮ್ಮನಹಳ್ಳಿ ಮೂಲದ ಅಶ್ವಿನಿ(22) ಮೃತ ದುರ್ದೈವಿ. ಪಟ್ಟಣದ ಕಾನುಕೇರಿಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಮೆಟ್ರಿಕ್​​​​​​ ಪೂರ್ವ ಬಾಲಕಿಯರ ವಿದ್ಯಾರ್ಥಿನಿಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತ ಅಶ್ವಿನಿ ಕಾನುಕೇರಿಯ ಉರ್ದು ಶಾಲೆ ಬಳಿ ತನ್ನ ಸ್ನೇಹಿತೆಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಶ್ವಿನಿ ಹಾಸ್ಟೆಲ್​ನಲ್ಲಿನ ಕೆಲಸ ಮುಗಿಸಿಕೊಂಡು ಬಂದ ಬಳಿಕ ತನ್ನ ಸ್ನೇಹಿತೆ ಕೆಲಸಕ್ಕೆ ತೆರಳಿದ್ದಾರೆ. ಅಶ್ವಿನಿ ರಾತ್ರಿ ಊಟ ಮಾಡಿ ಮಲಗಿದ್ದಾರೆ. ಸ್ನೇಹಿತೆ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಆಕೆಯನ್ನು ಸ್ನೇಹಿತೆ ಎಬ್ಬಿಸಲು ಹೋದಾಗ ಮೃತಪಟ್ಟಿದ್ದರು ಎಂದು ಸ್ನೇಹಿತೆ ತಿಳಿಸಿದ್ದಾರೆ.

ಯುವತಿಯ ಕುತ್ತಿಗೆ ಬಳಿ ರಕ್ತ ಹೆಪ್ಪುಗಟ್ಟಿರುವುದಾಗಿ ಶವ ಪರೀಕ್ಷೆ ಬಳಿಕ ವೈದ್ಯರು ತಿಳಿಸಿದ್ದಾರೆ. ಈ ಆಧಾರದ ಮೇಲೆ ಪರಿಚಿತರೇ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *