More

    ರಾಮಮಂದಿರ ಭಾರತೀಯರ ಹೆಮ್ಮೆಯ ಪ್ರತೀಕ

    ಹೊಸದುರ್ಗ: ರಾಮಭಕ್ತರ ತ್ಯಾಗ ಬಲಿದಾನದ ಫಲವಾಗಿ ನಿರ್ಮಾಣವಾಗಿರುವ ರಾಮಮಂದಿರ ಭಾರತೀಯರ ಹೆಮ್ಮೆಯ ಪ್ರತೀಕವಾಗಿದೆ ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಹೇಳಿದರು.

    ಅಯೋಧ್ಯೆಯಿಂದ ಬಂದಿರುವ ಶ್ರೀರಾಮ ಮಂತ್ರಾಕ್ಷತೆಯನ್ನು ತಾಲೂಕಿನ ಶಿವನಕಟ್ಟೆ ಗ್ರಾಮದಲ್ಲಿ ಸೋಮವಾರ ಮನೆಗಳಿಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

    ಕೋಟ್ಯಂತರ ಹಿಂದುಗಳ ಶತಮಾನದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಪ್ರಭು ಶ್ರೀರಾಮಚಂದ್ರ ಜನಿಸಿದ ಪುಣ್ಯಭೂಮಿಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದರು.

    ರಾಮಭಕ್ತರು ನೀಡಿದ ಕಾಣಿಕೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಅದರ ಪುಣ್ಯ ಎಲ್ಲರಿಗೂ ಲಭಿಸಲಿದೆ. ರಾಮ ಮಂತ್ರಾಕ್ಷತೆಯ ರೂಪದಲ್ಲಿ ಪ್ರತಿ ಮನೆಗೂ ಆಗಮಿಸುತ್ತಿದ್ದಾನೆ ಎಂದು ತಿಳಿಸಿದರು.

    ತಾಲೂಕಿನ ಪ್ರತಿಮನೆಗೆ ಜ.15ರವರೆಗೆ ಮಂತ್ರಾಕ್ಷತೆಯನ್ನು ತಲುಪಿಸುವ ಯೋಜನೆ ರೂಪಿಸಲಾಗಿದೆ. ಅಕ್ಷತೆಯ ಕಾಳನ್ನು ಭಕ್ತಿಯಿಂದ ಸ್ವೀಕರಿಸಿ ಮನೆಯಲ್ಲಿ ಪೂಜೆ ಸಲ್ಲಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

    ಜ.22ರಂದು ಎಲ್ಲರೂ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಿಲ್ಲದ ಕಾರಣ ಮನೆಯಲ್ಲಿ ರಾಮನಾಮ ಸ್ಮರಣೆ ಮಾಡುವ ಮೂಲಕ ಭಕ್ತಿ ಸಮರ್ಪಿಸುವ ಜತೆಗೆ ಮನೆಯಲ್ಲಿ ದೀಪಗಳನ್ನು ಬೆಳಗಿಸಿ ದೇವರಿಗೆ ನಮಿಸಬೇಕು.

    ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪೂಜಿಸಿ ತಲೆಯ ಮೇಲೆ ಹಾಕಿಕೊಳ್ಳುವ ಹಾಗೂ ಸಿಹಿತಿನಿಸು ತಯಾರಿಸುವ ಮೂಲಕ ರಾಮನ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ತಿಳಿಸಿದರು.

    ಹಿಂದು ಮುಖಂಡ ಗಂಗಾಧರ ಗುಪ್ತ, ಶಿವಕುಮಾರ್, ಪುರಸಭಾ ಮಾಜಿ ಸದಸ್ಯ ಶಶಿಧರ, ಗ್ರಾಪಂ ಸದಸ್ಯ ಸಿದ್ದೇಶ್, ಉದ್ಯಮಿ ಸಿದ್ದರಾಜು, ನಾಗಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts