ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ; ಸಿಹಿ ತಿನ್ನಿಸಿ ಸಂಭ್ರಮಿಸಿದ ಮಲ್ಲಿಕಾರ್ಜುನ ಖರ್ಗೆ

Congress Win
Published on

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತಿದ್ದಂತೆ, ಕೈ ನಾಯಕರು ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸುತ್ತಿದ್ದಾರೆ. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿಕೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಸಿ.ವೇಣುಗೋಪಾಲ್ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗೆಲುವನ್ನು 'ಜನತಾ ಜನಾರ್ಧನ'ನ ಗೆಲುವು ಎಂದು ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಕೆಟ್ಟ ಆಡಳಿತದ ವಿರುದ್ಧ ಜನರು ಉಗ್ರವಾಗಿ ಮತ ಚಲಾಯಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಇಂದು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸುವಂತೆ ತಿಳಿಸಲಾಗಿದೆ.

ಶಾಸಕರೊಂದಿಗಿನ ಸಭೆಯ ಬಳಿಕ ಹೈಕಮಾಂಡ್ ವೀಕ್ಷಕರನ್ನು ಕಳುಹಿಸುತ್ತದೆ. ನಂತರ ಸರ್ಕಾರ ರಚನೆಗೆ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net