ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ!

sowmya

ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಅವರನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಎಚ್ಎಂಟಿ ಕಂಪನಿಯ ಜಮೀನು ಮುಟ್ಟಿದರೆ ಹುಶಾರ್ ಎಂಬ ಎಚ್​ಡಿಕೆ ಹೇಳಿಕೆಗೆ ಈಶ್ವರ್ ಖಂಡ್ರೆ ತಿರುಗೇಟು! ಹೇಳಿದಿಷ್ಟು?

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ.

ಸೌಮ್ಯಾ ರೆಡ್ಡಿ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.‌ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು.

41 ವರ್ಷದ ಸೌಮ್ಯ ರೆಡ್ಡಿ ಮಾರ್ಚ್ 18, 1983ರಲ್ಲಿ ಜನಿಸಿದರು. ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್‌ನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಸೌಮ್ಯ ರೆಡ್ಡಿ ಪೂರ್ಣಗೊಳಿಸಿದ್ದಾರೆ.
ಜೊತೆಗೆ ತಾವು ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತೆ, ಮಾಜಿ ಶಾಸಕಿಯಾಗಿದ್ದು, ಇದೇ ತಮ್ಮ ಉದ್ಯೋಗ ಎಂದು ಈ ಹಿಂದೆ ಲೋಕಸಭಾ ಚುನಾವಣೆ ನಾಮಪತ್ರ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದರು. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ.

ದೆಹಲಿ ಧ್ವಜರೋಹಣ: ಅತಿಶಿ ಬದಲು ಗೃಹ ಸಚಿವ ಕೈಲಾಶ್ ಗೆಹಲೋತ್ ಆಯ್ಕೆ ಮಾಡಿದ ಲೆ.ಗವರ್ನರ್ ಸಕ್ಸೇನಾ​ !

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…