More

    ಸ್ಯಾಂಡಲ್​ವುಡ್​​ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣು

    ಬೆಂಗಳೂರು:  ಸ್ಯಾಂಡಲ್​ವುಡ್​​ ಚಲನಚಿತ್ರ ನಿರ್ಮಾಪಕ  ಸೌಂದರ್ಯ ಜಗದೀಶ್  ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಆದರೆ ಇವರ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.

    ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಮಹಹಾಲಕ್ಷ್ಮಿ ಲೇಔಟ್​​ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿ ರೇಖಾ ಜಗದೀಶ್  ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

    ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿಯೂ ಆಗಿರುವ ಅವರು  ಅಪ್ಪು ಮತ್ತು ಪಪ್ಪು, ಮಸ್ತ್ ಮಜಾ ಮಾಡಿ, ರಾಮ್‌ಲೀಲಾ, ಸ್ನೇಹಿತರು  ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

    ಬೆಂಗಳೂರಿನಲ್ಲಿ ಜೆಟ್​ಲಾಗ್​ ಪಬ್​ ಹೊಂದಿದ್ದ ಜಗದೀಶ್​ ಅವರು ಬಿಲ್ಡರ್​ ಕೂಡ ಆಗಿದ್ದರು. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​, ರಾಕ್​ಲೈನ್​ ವೆಂಕಟೇಶ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಅವರು ಆಪ್ತ ಒಡನಾಟ ಹೊಂದಿದ್ದರು.

    ಈ ಹೀರೋಗಾಗಿ ಏನು ಬೇಕಾದರೂ ಬಿಟ್ಟು ಹೋಗುತ್ತೇನೆಂದ್ರು ಪ್ರಿಯಾಮಣಿ

    ‘ನನ್ನ ಲೈಫ್​ಗೆ ಬೇಕು ವೈಫ್’ ಮಧ್ಯರಾತ್ರಿ ನನಗೆ ಅದು ಬೇಕು ಅನ್ನಿಸಿದಾಗ ಎದ್ದೆಳಬೇಕು; ಇದೇ ವರನ ಕಂಡೀಶನ್

    ದಯವಿಟ್ಟು ಗಂಡ, ಹೆಂಡ್ತಿ ಒಟ್ಟಿಗೆ ಸ್ನಾನ ಮಾಡಿ; ನೀರು ಉಳಿಸಲು ಮೇಯರ್‌ ಕೊಟ್ರು ಈ ಸಲಹೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts