18.5 C
Bangalore
Monday, December 16, 2019

ರಜನಿಕಾಂತ್​ ಮಗಳಿಗೆ ಆಟ, ಚೆನ್ನೈಗೆ ಪ್ರಾಣ ಸಂಕಟ: ಸಂವೇದನೆ ಮರೆತು ಕ್ಷಮೆಯಾಚಿಸಿದ ಸೌಂದರ್ಯ ರಜನಿಕಾಂತ್​!

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಚೆನ್ನೈ: ಮಳೆಯಿಲ್ಲದೇ ಹನಿ ನೀರಿಗೂ ತತ್ವಾರ ಉಂಟಾಗಿರುವ ಚೆನ್ನೈನಲ್ಲಿ ನೀರಿನ ಬಿಕ್ಕಟ್ಟು ದಿನೇ ದಿನೇ ಬಿಗಡಾಯಿಸುತ್ತಿದೆ. ಆದರೆ, ಇದರ ಅರಿವಿಲ್ಲದೇ ನಟ ಹಾಗೂ ರಾಜಕಾರಣಿ ರಜನಿಕಾಂತ್​ ಪುತ್ರಿ ಸೌಂದರ್ಯ ರಜನಿಕಾಂತ್​​ ಅವರು ತಮ್ಮ ಮಗನೊಂದಿಗೆ ಸ್ವಿಮ್ಮಿಂಗ್​ ಪೂಲ್​ನಲ್ಲಿ ವೀಕೆಂಡ್ ಮಸ್ತಿಯಲ್ಲಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಇದರ ಬೆನ್ನಲ್ಲೇ ಫೋಟೋ ಡಿಲೀಟ್​​ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಚೆನ್ನೈನಲ್ಲಿ ಹಿಂದೆಂದು ಕಾಣದ ರೀತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಸರ್ಕಾರದಿಂದ ಜನರಿಗೆ ಟ್ಯಾಂಕರ್​ ಮೂಲಕ ನೀರು ಪೂರೈಸಲಾಗುತ್ತಿದೆ. ನಗರದ ಹೊರಭಾಗದಲ್ಲಿರುವ ನಾಲ್ಕು ಜಲಾಶಯಗಳು ಕೂಡ ಸಂಪೂರ್ಣ ಬರಿದಾಗಿದೆ. ಇದನ್ನೆಲ್ಲಾ ಅರಿಯದೇ ಸೌಂದರ್ಯ ರಜನಿಕಾಂತ್​​, ತಮ್ಮ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಮಗ ‘ವೇದ್​’ ಜತೆಗೆ ಸ್ವಿಮ್ಮಿಂಗ್​ ಪೂಲ್​ನಲ್ಲಿ ಕಾಲ ಕಳೆದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್​ ಆಗಿ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಫೋಟೋ ಡಿಲೀಟ್​ ಮಾಡಿ ಕ್ಷಮೆಯಾಚಿಸಿದ್ದಾರೆ.

ಭಾನುವಾರ ಟ್ವೀಟ್​ ಮಾಡಿರುವ ಸೌಂದರ್ಯ, ಚೆನ್ನೈನಲ್ಲಿರುವ ನೀರಿನ ಸಮಸ್ಯೆಯನ್ನು ಅರಿತು ನನ್ನ ಟ್ರಾವೆಲ್​ ಡೈರಿಯಯಿಂದ ಪೋಟೋ ಡಿಲೀಟ್​ ಮಾಡಲಾಗಿದೆ. ಚಿಕ್ಕ ವಯಸ್ಸಿನಲ್ಲಿ ಮಕ್ಕಳ ದೈಹಿಕ ಚಟುವಟಿಕೆಯ ಪ್ರಾಮುಖ್ಯತೆಯನ್ನು ತಿಳಿಸುವ ಸಲುವಾಗಿ ಈ ಫೋಟೋವನ್ನು ಹಂಚಿಕೊಳ್ಳಲಾಗಿತ್ತು ಎಂದು ಸ್ಪಷ್ಟನೆ ನೀಡಿ, ನೀರನ್ನು ಉಳಿಸಿ ಎಂದು ಕರೆ ನೀಡಿದ್ದಾರೆ.

ಸೌಂದರ್ಯ ಅವರು ವಿಶಾಗನ್​ ವನಂಗಮುಡಿ ಎಂಬುವರ ಜತೆ ಕಳೆದ ಫೆಬ್ರವರಿಯಲ್ಲಿ ಸಪ್ತಪದಿ ತುಳಿದಿದ್ದರು. ವಿಶೇಷ ಅಂದರೆ ಇಬ್ಬರಿಗೂ ಎರಡನೇ ಮದುವೆಯಾಗಿತ್ತು. ಮೊದಲು ಆರ್​.ಅಶ್ವಿನ್​ ಎಂಬುವರ ಜತೆ ವಿವಾಹವಾಗಿದ್ದ ಸೌಂದರ್ಯ, ಕುಟುಂಬ ಕಲಹ ಕಾರಣದಿಂದ ವಿಚ್ಛೇದನ ಪಡೆದುಕೊಂಡಿದ್ದರು. ಸೌಂದರ್ಯ ಅವರಿಗೆ ವೇದ್​ ಎಂಬ ಹೆಸರಿನ ಮೂರು ವರ್ಷದ ಮಗನಿದ್ದಾನೆ. ಸೌಂದರ್ಯ, ಕೊಚಾಡಿಯನ್​ ಹಾಗೂ ವೆಲಇಲ್ಲೈ ಪಟ್ಟಾಧಾರಿ 2 ಚಿತ್ರಗಳನ್ನು ನಿರ್ದೇಶಿಸಿದ್ದರು. (ಏಜೆನ್ಸೀಸ್​)

https://www.instagram.com/p/BzU4XCQDaqQ/?utm_source=ig_embed

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...