More

    ಇಂದಿನಿಂದ ಚುಟುಕು ಕ್ರಿಕೆಟ್ ವಿಶ್ವ ಸಮರ; ಆಸ್ಟ್ರೇಲಿಯಾಕ್ಕೆ ದಕ್ಷಿಣ ಆಫ್ರಿಕಾ ಸವಾಲು

    ಅಬುಧಾಬಿ: ಚೊಚ್ಚಲ ಪ್ರಶಸ್ತಿಗಾಗಿ ಹಂಬಲಿಸುತ್ತಿರುವ ವಿಶ್ವ ಕ್ರಿಕೆಟ್‌ನ ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟಿ20 ವಿಶ್ವಕಪ್ ಟೂರ್ನಿಯ ಸೂಪರ್-12 ಹಂತದ ಮೊದಲ ಪಂದ್ಯದಲ್ಲಿ ಎದುರಾಗಲಿವೆ. ಆಸ್ಟ್ರೇಲಿಯಾ ತಂಡ ಇತ್ತೀಚೆಗೆ ಬಾಂಗ್ಲಾದೇಶ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಭಾರತ ಹಾಗೂ ಇಂಗ್ಲೆಂಡ್ ತಂಡಗಳ ಎದುರು ನಿರಾಸೆ ಅನುಭವಿಸಿತ್ತು. ಆಸ್ಟ್ರೇಲಿಯಾ ತಂಡ ಆಡಿದ ಕಡೇ 13 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳನ್ನಷ್ಟೇ ಗೆದ್ದಿದೆ.

    ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ವೃತ್ತಿಜೀವನದ ಅತ್ಯಂತ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್‌ನಲ್ಲಿ ರನ್ ಗಳಿಸಲು ಸಾಧ್ಯವಾಗದೆ ನಾಯಕತ್ವದ ಜತೆಗೆ ತಂಡದಲ್ಲಿ ಸ್ಥಾನವನ್ನು ತೊರೆದಿದ್ದ ವಾರ್ನರ್, ಅಭ್ಯಾಸ ಪಂದ್ಯದಲ್ಲೂ ನಿರಾಸೆ ಅನುಭವಿಸಿದ್ದರು. ನಾಯಕ ಆರನ್ ಫಿಂಚ್, ಉಪನಾಯಕ ಪ್ಯಾಟ್ ಕಮ್ಮಿನ್ಸ್ ಅಭ್ಯಾಸ ಪಂದ್ಯಗಳಿಂದ ಹೊರಗುಳಿದಿದ್ದರು. ಆಲ್ರೌಂಡರ್‌ಗಳಾದ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯಿನಿಸ್, ಮಿಚೆಲ್ ಮಾರ್ಷ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ತಂಡ ಟೂರ್ನಿಗೂ ಮುನ್ನ ವೆಸ್ಟ್ ಇಂಡೀಸ್, ಐರ್ಲೆಂಡ್, ಶ್ರೀಲಂಕಾ ಎದುರು ಸರಣಿ ಜಯಿಸಿದ್ದು, ಎರಡು ಅಭ್ಯಾಸ ಪಂದ್ಯಗಳಲ್ಲೂ ಜಯ ದಾಖಲಿಸಿ ಆತ್ಮವಿಶ್ವಾಸದ ಅಲೆಯಲ್ಲಿದೆ.

    ಮುಖಾಮುಖಿ: 21, ಆಸ್ಟ್ರೇಲಿಯಾ: 13, ದಕ್ಷಿಣ ಆಫ್ರಿಕಾ: 8
    ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ: 1, ಆಸ್ಟ್ರೇಲಿಯಾ: 1, ದ.ಆಫ್ರಿಕಾ: 0,
    ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
    ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts