More

    ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್…

    ಸೆಂಚುರಿಯನ್: ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ಡಿಕಾಕ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಡಿಕಾಕ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದರಿಂದ ಭಾರತ ವಿರುದ್ಧದ 2ನೇ ಹಾಗೂ 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ಮೊದಲೇ ನಿರ್ಧರಿಸಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಎದುರು ದಕ್ಷಿಣ ಆಫ್ರಿಕಾ ತಂಡ ಸೋತ ಬೆನ್ನಲ್ಲೇ ಡಿಕಾಕ್ ನಿವೃತ್ತಿ ಘೋಷಿಸಿದ್ದಾರೆ.

    ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದು, ಕುಟುಂಬದವರ ಜತೆ ಹೆಚ್ಚಿನ ಸಮಯ ಕಳೆಯಬೇಕಿದೆ ಎಂದು ಡಿಕಾಕ್ ಹೇಳಿದ್ದಾರೆ. 29 ವರ್ಷದ ಡಿಕಾಕ್ 2021ರ ಆರಂಭಿಕ ದಿನಗಳಲ್ಲಿ ತಂಡದ ಹಂಗಾಮಿ ನಾಯಕನಾಗಿದ್ದರು. ಇದೀಗ ವರ್ಷಾಂತ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಡಿಕಾಕ್ 54 ಟೆಸ್ಟ್ ಪಂದ್ಯಗಳಿಂದ 6 ಶತಕಗಳು ಒಳಗೊಂಡಂತೆ 3300 ರನ್ ಪೇರಿಸಿದ್ದರು.

    ವೇಗಿಗಳ ಕರಾರುವಾಕ್ ದಾಳಿ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 113 ರನ್‌ಗಳಿಂದ ಸೋಲಿಸಿ ಐತಿಹಾಸಿಕ ಸಾಧನೆ ಮೆರೆದಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ 1-0 ಮುನ್ನಡೆ ಸಾಧಿಸಿತು. ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಗೆದ್ದ ಏಷ್ಯಾದ ಮೊದಲ ತಂಡವೆಂಬ ಹೆಗ್ಗಳಿಕೆ ಭಾರತದ್ದಾಗಿದೆ. ಆತಿಥೇಯ ತಂಡ 2014ರ ಬಳಿಕ ಈ ಮೈದಾನದಲ್ಲಿ ಮೊದಲ ಸೋಲು ಕಂಡಿತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts