

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸಂಘಟನೆ ಬಲಪಡಿಸಬೇಕಾದರೆ ಸದಸ್ಯರು ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ಅಗತ್ಯವಾಗಿದ್ದು, ಸಾಮಾಜಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ಬೆಳ್ತಂಗಡಿ ವಲಯ ಉತ್ತಮ ಹೆಸರು ಗಳಿಸಿದೆ ಎಂದು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಹೇಳಿದರು.
ಗುರುವಾಯನಕೆರೆ ಛಾಯಾಭವನದಲ್ಲಿ ಮಂಗಳವಾರ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯದ 23ನೇ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ವಲಯ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕೋಶಾಧಿಕಾರಿ ನವೀನ್ ರೈ ಪಂಜಳ, ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಸಂಚಾಲಕ ಕರುಣಾಕರ ಕಾನಂಗಿ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ , ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ.ವಸಂತ್ ಶರ್ಮ ಉಜಿರೆ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ.ಸುವರ್ಣ ಬೆಳ್ತಂಗಡಿ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್.ಪ್ರಸಾದ್ ಗೇರುಕಟ್ಟೆ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಉಪಸ್ಥಿತರಿದ್ದರು. ಕೆ.ವಸಂತ್ ಶರ್ಮ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಿಜಯ ಎಚ್.ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಲೆಕ್ಕಪತ್ರ ಮಂಡನೆ ಮಾಡಿದರು. ಜಗದೀಶ್ ಜೈನ್, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು.