

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ತಂತ್ರಜ್ಞಾನ ಮುಂದುವರಿದಂತೆ ನಾವು ಅದೇ ವೇಗದಲ್ಲಿ ಮುಂದುವರಿಯಬೇಕು. ಹಾಗಾದಲ್ಲಿ ಮಾತ್ರ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ. ಛಾಯಾಗ್ರಹಣ ಕ್ಷೇತ್ರದಲ್ಲಿ ತಂತ್ರಜ್ಞಾನ ಅತಿ ಅವಶ್ಯವಾಗಿದ್ದು, ಹೊಸತನವನ್ನು ಛಾಯಾಗ್ರಾಹಕರು ತಮ್ಮದಾಗಿಸಿಕೊಳ್ಳಬೇಕು ಎಂದು ತೋಡಾರು ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಶ್ ಡಿಸೋಜ ಹೇಳಿದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ- ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸದಸ್ಯರಿಗಾಗಿ ಕಾಲೇಜು ಸಭಾಭವನದಲ್ಲಿ ಆಯೋಜಿಸಲಾದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ತರಬೇತುದಾರ ಬಾಬು ಎಸ್.ಮೈಸೂರ್ ಅವರು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಸಮಿತಿ ಸಂಚಾಲಕ ಕರುಣಾಕರ್ ಕಾನಂಗಿ, ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಭಾರದ್ವಾಜ್, ಹರೀಶ್ ಪಿ.ಕೆ., ಹರೀಶ್ ಸುಳ್ಯ, ಮೂಡುಬಿದಿರೆ ವಲಯ ಅಧ್ಯಕ್ಷ ರಾಜೇಶ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ ಸ್ವಾಗತಿಸಿದರು. ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಲ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ವಂದಿಸಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ. ನಮ್ಮ ಛಾಯಾಗ್ರಹಣ ಕ್ಷೇತ್ರದಲ್ಲೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಪರಿಚಯವಾಗುತ್ತಿದೆ. ಛಾಯಾಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.- ಪದ್ಮಪ್ರಸಾದ್ ಜೈನ್, ಎಸ್ಕೆಪಿಎ ಜಿಲ್ಲಾಧ್ಯಕ್ಷ