More

  ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ: ‘ಸ್ಯಾಮ್‌ ಪಿತ್ರೋಡಾ’ ಹೇಳಿಕೆ ವಿರುದ್ಧ ಬಿವೈ ವಿಜಯೇಂದ್ರ ಕಿಡಿ!

  ಬೆಂಗಳೂರು: ಕೆಲ ದಿನಗಳ ಹಿಂದೆ ಪಿತ್ರಾರ್ಜಿತ ತೆರಿಗೆಯ ಬಗ್ಗೆ ಮಾತನಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ರಾಹುಲ್ ಗಾಂಧಿ ಅವರ ಆಪ್ತ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಇದೀಗ ಮತ್ತೊಂದು ವಿವಾದ ಸುಳಿಯಲ್ಲಿ ಸಿಲುಕಿದ್ದಾರೆ.

  ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ!

  ದಕ್ಷಿಣ ಆಭರತೀಯರು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ. ಇಂತಹ ಹೋಲಿಕೆಯನ್ನು ಯಾರು ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಳಿ ನಡೆಸಿದ್ದಾರೆ. ತಮ್ಮ ಎಕ್ಸ್ ಖಾತೆ ಮೂಲಕ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿರುವ ಅವರ, ಈ ಹೇಳಿಕೆ ನೋಡಿದರೆ ನೆಹರೂ-ಗಾಂಧಿ ಕುಟುಂಬದ ವಸಾಹತು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದಿದ್ದಾರೆ.

  ಕಾಂಗ್ರೆಸ್ ಪಕ್ಷ ಇಂತಹ ವಿಭಜಕ ನೀತಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಏನು? ಕನ್ನಡದ ಹೆಮ್ಮೆಯ ಬಗ್ಗೆ ಮಾತನಾಡುವ ಇವರು ಈಗ ಏನು ಹೇಳ್ತಾರೆ ಎಂದು ಪ್ರಶ್ನೆ ಮಾಡಿದರು. ದ ಸ್ಟೇಟ್ಸ್ ಮನ್ ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಭಾರತವು ಅತ್ಯುತ್ತಮ ಪ್ರಜಾಪ್ರಭುತ್ವ ಆಧಾರಿತ ರಾಷ್ಟ್ರವೆಂಬ ಹೆಗ್ಗಳಿಕೆ ಗಳಿಸಿರುವುದರ ಹಿಂದಿನ ಕಾರಣಗಳ ಬಗ್ಗೆ ಮಾತನಾಡಿದ್ದಾರೆ.

  ಕಾಂಗ್ರೆಸ್​ ನಾಯಕ ಸ್ಯಾಮ್ ಪಿತ್ರೋಡಾ ಏನು ಹೇಳಿದ್ರು: ಭಾರತದ ಪೂರ್ವ ಭಾಗದವರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕರನ್ನರಂತೆ ಕಾಣುತ್ತಾರೆ. ಇನ್ನು, ಭಾರತದ ಪಶ್ಚಿಮ ಭಾಗದವರು ಅರಬ್ಬರಂತೆ ಕಂಡರೆ, ಉತ್ತರ ಭಾರತೀಯರು ಬಿಳಿ ಚರ್ಮವುಳ್ಳವರಾಗಿದ್ದಾರೆ. ತಮ್ಮ ಬಣ್ಣ, ಸಂಸ್ಕೃತಿಗಳಲ್ಲಿ ಇಂತಹ ಹಲವಾರು ವ್ಯತ್ಯಾಸಗಳಿದ್ದರೂ ಭಾರತೀಯರೆಲ್ಲರೂ ಉತ್ತಮವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ. ವೈವಿಧ್ಯತೆಗಳ ನಡುವೆಯೂ ಒಗ್ಗಟ್ಟಿನಿಂದ, ಸಹಮತದಿಂದ ಜೀವನ ಸಾಗಿಸುತ್ತಿರುವುದೇ ಭಾರತೀಯರ ಹೆಗ್ಗಳಿಕೆಯಾಗಿದೆ ಎಂದಿದ್ದರು.

  ಮಧ್ಯಪ್ರದೇಶ: ಮಗುವಿಗೆ ಜನ್ಮನೀಡಿದ 13 ವರ್ಷದ ಅಪ್ರಾಪ್ತ ಬಾಲಕಿ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts