More

    VIDEO | ನಾಟು ನಾಟು ಹಾಡಿಗೆ ದಕ್ಷಿಣ ಕೊರಿಯಾ ರಾಯಭಾರ ಕಚೇರಿ ಸಿಬ್ಬಂದಿ ನೃತ್ಯ; ಪ್ರಧಾನಿ ಮೋದಿ ಶ್ಲಾಘನೆ

    ನವದೆಹಲಿ: RRR ಸಿನಿಮಾದ ಹಾಡು ನಾಟು ನಾಟು ಪ್ರಪಂಚದಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಸಿನಿಮಾ ಬಿಡುಗಡೆಯಾದಾಗಿನಿಂದಲೂ ರೀಲ್ಸ್ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಪಡೆದುಕೊಂಡಿತ್ತು. ವಿವಿಧ ಕ್ಷೇತ್ರಗಳ ಗಣ್ಯರು ಕೂಡ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣಲದಲ್ಲಿ ಟ್ರೆಂಡಿಂಗ್ ಪಡೆದುಕೊಂಡಿತ್ತು.

    ಇದೀಗ ಭಾರತದ ದಕ್ಷಿಣ ಕೊರಿಯಾ ರಾಯಭಾರ ಕಚೇರಿ ಅಧಿಕಾರಿಗಳು ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ಭಾರತದ ಕೊರಿಯಾ ರಾಯಭಾರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಸಾಕಷ್ಟು ವೈರಲ್ ಆಗಿದೆ. ಇದೀಗ ಇವರ ನೃತ್ಯ ಪ್ರಧಾನಿ ನರೇಂದ್ರ ಮೋದಿಯ ಅವರ ಗಮನ ಸೆಳೆದಿದೆ.

    ಇದನ್ನೂ ಓದಿ: ನಾಳೆ ಬೆಳಗಾವಿಗೆ ಪ್ರಧಾನಿ ಮೋದಿ; ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿಕೆ

    ಕೊರಿಯ ರಾಯಭಾರಿ ಚಾಂಗ್ ಜೆ ಬೊಕ್ ಸಹ ತಮ್ಮ ಕಚೇರಿಯ ಅಧಿಕಾರಿಗಳೊಂದಿಗೆ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವೀಡಿಯೋವನ್ನು ಪ್ರಧಾನಿ ಮೋದಿ ಹಂಚಿಕೊಂಡು ಸಂಪೂರ್ಣ ತಂಡದ ಪರಿಶ್ರಮಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

    ಭಾರತದ ದಕ್ಷಿಣ ಕೊರಿಯಾ ರಾಯಭಾರಿ ಕಚೇರಿ ಅಧಿಕಾರಿಗಳ ನಾಟು ನಾಟು ಹಾಡಿನ ಡ್ಯಾನ್ಸ್ ವೀಡಿಯೋ ಟ್ವಿಟರ್​ನಲ್ಲಿ ಟ್ರೆಂಡಿಂಗ್​ನಲ್ಲಿದ್ದು ಈಗಾಗಲೇ 5 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಕಲ್ಲು ಹೊಡೆದ ದುಷ್ಕರ್ಮಿಗಳು; ಕಿಟಕಿ ಗಾಜುಗಳಿಗೆ ಹಾನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts