More

    ವಾಯುಭಾರ ಕುಸಿತದಿಂದ ನೈಋತ್ಯ ಮಾನ್ಸೂನ್​ಕ್ಕಿಲ್ಲ ಎಫೆಕ್ಟ್​

    ಬೆಂಗಳೂರು:ಬಂಗಾಳಕೊಲ್ಲಿಯ ಕೆಲ ಭಾಗಗಳಲ್ಲಿ,ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪದಲ್ಲಿ ಮುಂದಿನ 2 ದಿನ ನೈಋತ್ಯ ಮಾನ್ಸೂನ್​ ಇನ್ನಷ್ಟು ವ್ಯಾಪಿಸಲು ಪರಿಸ್ಥಿತಿ ಅನುಕೂಲವಾಗಿದೆ.

    ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಶುಕ್ರವಾರ( ಮೇ 24) ವಾಯುಭಾರ ಕುಸಿತವಾದರೂ ಮಾನ್ಸೂನ್​ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲ್ಲ. ಅಲ್ಲದೆ, ವಾಯುಭಾರದ ಕುಸಿತದಿಂದ ಚಂಡಮಾರುತವಾಗಿ ಉಂಟಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಮಾರುತಗಳು ಪ್ರಬಲವಾಗಿರುವ ಪರಿಣಾಮದಿಂದ ಮಾಸಾಂತ್ಯಕ್ಕೆ ಕೇರಳಕ್ಕೆ ಪ್ರವೇಶಿಸಲಿವೆ. ಕೇರಳಕ್ಕೆ ಬಂದಿರುವ ಮಾರುತಗಳು ಪ್ರಬಲವಾದರೆ ಅದೇ ದಿನ ಅಥವಾ ಒಂದೆರೆಡು ದಿನದಲ್ಲಿ ಕರ್ನಾಟಕಕ್ಕೂ ಆಗಮಿಸಲಿವೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ವಿಜಯವಾಣಿಗೆ ತಿಳಿಸಿದ್ದಾರೆ.

    ತಮಿಳುನಾಡು, ಪುದುಚೇರಿ, ಕಾರೈಕಲ್​, ಕೇರಳ, ಕರ್ನಾಟಕದ ಕರಾವಳಿ, ದಣ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮುಂದಿನ ಮೂರು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಆಶಾದಾಯಕವಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ವಾಡಿಕೆ ಅಥವಾ ವಾಡಿಕೆಗಿಂತ ತುಸು ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಈಗಾಗಲೇ ಐಎಂಡಿ ಹೇಳಿದೆ.

    ಮೇರಿಹಿಲ್ ಹೆಲಿಪ್ಯಾಡ್ ಎದುರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಸಂಗ್ರಹ ಸಂಚಾರ ದುಸ್ತರ

    ಐದು ದಿನ ಸಾಧಾರಣ ಮಳೆ
    ಬೆಂಗಳೂರು, ಬೆಂ.ಗ್ರಾಮಾಂತರದ ಹೆಸರುಘಟ್ಟ, ಚಾಮರಾಜನಗರದ ಹರದನಹಳ್ಳಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಕೋಲಾರದ ಟಮಕಾ, ಮಂಡ್ಯದ ಕೆ. ಆರ್​.ಪೇಟೆ ಸೇರಿ ರಾಜ್ಯದ ಹಲವೆಡೆ ಬುಧವಾರ ವರ್ಷಧಾರೆಯಾಗಿದೆ. ದಕ್ಷಿಣ ಕನ್ನಡ, ಕೊಡಗಿನಲ್ಲಿ ಮೇ 23, ಮೇ 24ರಂದು, ಮೈಸೂರಿನಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮೇ 27ರವರೆಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಕೆಲ ಜಿಲ್ಲೆಗಳಲ್ಲಿಯೂ ಬಿರುಗಾಳಿ ಜಾಸ್ತಿ ಇರಲಿದೆ. ಉತ್ತರ ಕರ್ನಾಟಕದಲ್ಲಿ ಮೇ 23ರಿಂದ ಗರಿಷ್ಠ ತಾಪಮಾನದಲ್ಲಿ 2-3 ಡಿ.ಸೆ. ಕುಸಿತವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts