ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು

boje
Published on

ಮೈಸೂರು: ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು 19479 ಮತಗಳು ಚಲಾವಣೆಯಾಗಿದ್ದು ಆ ಪೈಕಿ 821 ಮತಗಳು ಅಸಿಂಧುವಾಗಿತ್ತು.

ಕ್ಷೇತ್ರದಲ್ಲಿ ಒಟ್ಟು 19,479 ಒಟ್ಟು ಚಲಾವಣೆ ಆಗಿದ್ದು, ಇದರಲ್ಲಿ 821 ಮತ ತಿರಸ್ಕೃತಗೊಂಡಿವೆ. ಇನ್ನುಳಿದ 18,658 ಮತಗಳಲ್ಲಿ 9,330 ಕೋಟಾ ನಿಗದಿಯಾಗಿತ್ತು. 9829 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಭೋಜೇಗೌಡ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4,562 ಮತಗಳುನ್ನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net