More

    ಬಿತ್ತನೆ ಮಾಡಿದ್ದ ರೈತರಿಗೆ ಸಂತಸ

    ಅಥಣಿ: ತಾಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆ, ಹಳ್ಳ-ಕೊಳ್ಳಗಳು ತುಂಬಿದ್ದು, ಬಿತ್ತನೆ ಮಾಡಿ ಆಕಾಶದತ್ತ ಮುಖಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ತಾಲೂಕಿನ ವಿವಿಧ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ್ದ ಬದು ಮತ್ತು ಬಾಂದಾರ, ಹೂಳೆತ್ತಿದ ಕೆರೆಗಳಲ್ಲಿ ಮಳೆನೀರು ಸಂಗ್ರಹವಾಗಿದೆ. ಕೆರೆ ಹೂಳು ತೆಗೆದ ಪರಿಣಾಮ ಅಧಿಕ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಅಥಣಿ ಪಟ್ಟಣದ ವಿವಿಧ ವಾರ್ಡ್‌ಗಳ ಚರಂಡಿಗಳಲ್ಲಿ ನೀರು ತುಂಬಿ ಹರಿದವು.

    ಸಂಬರಗಿ ವರದಿ: ಗಡಿಭಾಗದ ವಿವಿಧ ಗ್ರಾಮಗಳಲ್ಲಿ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಮುಂಗಾರು ಬಿತ್ತನೆ ಮಾಡಲು ರೈತರಿಗೆ ಅನುಕೂಲವಾಗಿದೆ. ಗುರುವಾರ ರಾತ್ರಿ ಸುಮಾರು 4 ಗಂಟೆಗೂ ಅಧಿಕ ಕಾಲ ಭಾರಿ ಮಳೆ ಸುರಿದಿದ್ದರಿಂದ ಜಮೀನುಗಳಿಗೆ ನೀರು ಹರಿಯಿತು. ಈಗಾಗಲೇ ಬಿತ್ತನೆ ಮಾಡಿ ನೀರಿಲ್ಲದೆ ಹತಾಶರಾಗಿದ್ದ ರೈತರು ಸುರಿದ ಮಳೆಯಿಂದ ಸಂತಸಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts