ಶಾಸಕರ ಗೈರು, ಬೀಜ ಗೊಬ್ಬರ ವಿತರಣೆ ಮುಂದಕ್ಕೆ

blank

ಚನ್ನಗಿರಿ: ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಚನ್ನಗಿರಿ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭಕ್ಕೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಕೊನೇ ಕ್ಷಣದಲ್ಲಿ ಗೈರಾದ ಕಾರಣ ಕಾರ್ಯಕ್ರಮವನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಬೀಜ, ಗೊಬ್ಬರ ಪಡೆಯಲು ತಾಲೂಕಿನ ವಿವಿಧ ಭಾಗಗಳಿಂದ 80ಕ್ಕೂ ಅಧಿಕ ರೈತರು ಆಗಮಿಸಿದ್ದರಾದರೂ ಶಾಕರಿಲ್ಲ ಎಂಬ ಕಾರಣಕ್ಕೆ ಸಂಘಟಕರು ಕಾರ್ಯಕ್ರಮವನ್ನು ಮುಂದೂಡುವ ನಿರ್ಧಾರ ಕೈಗೊಂಡರು.
ಶಾಸಕ ಶಿವಗಂಗಾ ಬಸವರಾಜ್ ಅವರ ಅನುಮತಿ ಪಡೆದೇ ಬೀಜ, ಗೊಬ್ಬರ ವಿತರಣೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಪಡಿಸಲಾಗಿತ್ತು. ಈ ಕುರಿತು ರೈತರಿಗೆ ಮಾಹಿತಿ ನೀಡಿ ಎಲ್ಲರೂ ಆಗಮಿಸುವಂತೆ ತಿಳಿಸಲಾಗಿತ್ತು. ಅದರಂತೆ ಎಲ್ಲ ರೈತರು ಆಗಮಿಸಿದ್ದರು.
ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ನಿಗದಿಯಾಗಿತ್ತು. ಶಾಮಿಯಾನ, ಹಾರ, ತುರಾಯಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯೋಜಕರು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮ ಆರಂಭವಾಗುತ್ತದೆ ಎಂದು ಸಮಜಾಯಿಷಿ ನೀಡುತ್ತಲೇ ಇದ್ದರು.
ಆದರೆ, ಮಧ್ಯಾನ್ಹ 2 ಗಂಟೆ ಆದರೂ ಶಾಸಕರು ಬರಲಿಲ್ಲ. ಕೊನೆಗೆ, ಅನ್ಯ ಕಾರ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಎಂದು ಶಾಸಕರ ಆಪ್ತರು ತಿಳಿಸಿದರು.
ಶಾಸಕರು ಬಾರದ ಕಾರಣ ಕಾರ್ಯಕ್ರಮ ಮುಂದೂಡಿದ್ದು ಸೋಮವಾರ ನಡೆಯಲಿದೆ. ಎಲ್ಲ ರೈತರು ಕಾರ್ಯಕ್ರಮಕ್ಕೆ ಬನ್ನಿ ಎಂದರು.
ದೈನಂದಿನ ಕೆಲಸಕಾರ್ಯಗಳನ್ನು ಬಿಟ್ಟು , ನೂರಾರು ರೂ. ಖರ್ಚು ಮಾಡಿಕೊಂಡು ಬಂದಿದ್ದ ರೈತರು ಆಯೋಜಕರನ್ನು ಶಪಿಸುತ್ತ ಮನೆ ಕಡೆ ತೆರಳಿದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…