More

  ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ!

  ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಕನೌಜ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅಖಿಲೇಶ್ ಯಾದವ್ ಅವರು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.

  ಇದನ್ನೂ ಓದಿ: ತಂಗಿಗೆ ಉಡುಗೊರೆ ಕೊಡಲು ಮುಂದಾದ ಅಣ್ಣನನ್ನೇ ಹತ್ಯೆಗೈದ ಪತ್ನಿಯ ಸಹೋದರರು!

  ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಕನೌಜ್​ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷವು ಸಂಜೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ತಿಳಿಸಿದೆ.

  ಸಮಾಜವಾದಿ ಪಕ್ಷವು ಈ ಕ್ಷೇತ್ರಕ್ಕೆ ಸೋಮವಾರ ತೇಜ್ ಪ್ರತಾಪ್ ಸಿಂಗ್ ಅವರ ಹೆಸರನ್ನು ಘೋಷಣೆ ಮಾಡಿತ್ತು. ಆದರೆ ಬುಧವಾರ ಸಂಜೆ ಪಕ್ಷವು ತನ್ನ ನಿರ್ಧಾರ ಬದಲಿಸಿಕೊಂಡಿದೆ.

  ಅಖಿಲೇಶ್ ಅವರು 2000 ರಲ್ಲಿ ಕನೌಜ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ 2004 ಮತ್ತು 2009 ರಲ್ಲೂ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಈ ಕ್ಷೇತ್ರವನ್ನು ತೊರೆದಿದ್ದರು. ಆ ಸಂದರ್ಭದಲ್ಲಿ ನಡೆದ ಉಪಚುನಾವಣೆಯಲ್ಲಿ ಅಖಿಲೇಶ್ ಯಾದವ್​ ಪತ್ನಿ ಡಿಂಪಲ್​ ಯಾದವ್​ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಮೇ 13 ರಂದು ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಕನ್ನೌಜ್ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.

  See also  ಖಜಾನೆ ಲೂಟಿ ಮಾಡಿ ಈಗ ಚೊಂಬು ಇಡ್ಕೊಂಡಿದ್ದಾರೆ…! ಕಾಂಗ್ರೆಸ್ ವಿರುದ್ಧ ಎಚ್​ಡಿಕೆ ಕಿಡಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts