ಶಿವಮೊಗ್ಗದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್‌ಪಿ

roudy sheeters parred

ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ರೌಡಿಗಳ ಪರೇಡ್ ಮತ್ತು ಭದ್ರಾವತಿ ಹಾಗೂ ಸಾಗರ ಉಪವಿಭಾಗಗಳಲ್ಲಿ ಗಣೇಶ ಪ್ರತಿಷ್ಟಾಪನಾ ಸಮಿತಿಯ ಸದಸ್ಯರ ಸಭೆಗಳನ್ನು ನಡೆಸಿದ್ದಾರೆ.

ನಗರದ ಡಿಎಆರ್ ಸಭಾಂಗಣದ ಆವರಣದಲ್ಲಿ ಶುಕ್ರವಾರ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಶಿವಮೊಗ್ಗದ ರೌಡಿಗಳ ಪರೇಡ್ ನಡೆಸಿದರು. ಪರೇಡ್‌ನಲ್ಲಿ 110 ರೌಡಿಗಳು ಹಾಜರಿದ್ದು ಅವರ ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ಪರಿಶಿಲನೆ ನಡೆಸಿ ಕೆಲ ಎಚ್ಚರಿಕೆಗಳನ್ನೂ ನೀಡಿದರು.
ವಾರದಲ್ಲಿ 2 ಬಾರಿ ಕಡ್ಡಾಯವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹೋಗಿ ಹಾಜರಾತಿ ನೀಡಬೇಕು. ನಿಮ್ಮ ಚಟುವಟಿಕೆ ಮತ್ತು ಚಲನ ವಲನಗಳ ಮೇಲೆ ನಿಗಾ ಇಡಲಾಗಿದ್ದು, ಒಂದು ವೇಳೆ ಕಾನೂನು ಬಾಹಿರ ಚಟುವಟಿಕೆ ಮತ್ತು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ, ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆದಾಯದ ಮೂಲ ಮತ್ತು ಸ್ನೇಹಿತರ ಕುರಿತು ಪೊಲೀಸ್ ಇಲಾಖೆಯಿಂದ ನಿರಂತರವಾಗಿ ನಿಗಾ ಇಡಲಾಗುವುದು. ನೀವು ಸ್ನೇಹಿತರನ್ನು ಸೇರಿಸಿಕೊಂಡು ಗುಂಪು ಕಟ್ಟಿಕೊಂಡು ಅಡ್ಡ ಮಾಡಿಕೊಳ್ಳುವುದು, ರಾತ್ರಿ ವೇಳೆ ಮನೆಯಲ್ಲಿರದೇ ಅನಾವಶ್ಯಕವಾಗಿ ಹೊರಗಡೆ ಸುತ್ತಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. ಹೇರ್ ಕಟಿಂಗ್ ಮತ್ತು ಶೇವಿಂಗ್ ಮಾಡಿಸಿಕೊಂಡು ಶಿಸ್ತಾಗಿ ಕಾಣುವಂತಹ ಉಡುಪುಗಳನ್ನು ಧರಿಸಿ ಮತ್ತು ಕಾನೂನನ್ನು ಗೌರವಿಸಿ ಹಾಗೂ ಕಾನೂನನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವಿಸಬೇಕು. ಇದು ನಿಮಗೆ ಒಳ್ಳೆಯದು. ಇಲ್ಲದೇ ಹೋದಲ್ಲಿ ನಿಮ್ಮ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ ಎಂದು ಖಡಕ್ ಸೂಚನೆ ನೀಡಿದರು.
ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ, ಶಿವಮೊಗ್ಗ ಬಿ ಉಪ ವಿಭಾಗ ಡಿವೈಎಸ್‌ಪಿ ಎಂ.ಸುರೇಶ್, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಬು ಆಂಜನಪ್ಪ, ಆಯಾ ಠಾಣೆಗಳ ಇನ್‌ಸ್ಪೆಕ್ಟರ್‌ಗಳು, ಪಿಎಸ್‌ಐಗಳು ರೌಡಿ ಪರೇಡ್ ವೇಳೆ ಹಾಜರಿದ್ದರು.

Share This Article

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…