More

    ಪುನೀತ್ ಕೆರೆಹಳ್ಳಿ ಬಂಧನ | ರಾಮನಗರಕ್ಕೆ ಕರೆತರಲು ರಾಜಸ್ಥಾನ ಕೋರ್ಟ್ ಅನುಮತಿ ಸಿಗಬೇಕಿದೆ; ಎಸ್​​ಪಿ ಕಾರ್ತಿಕ್ ರೆಡ್ಡಿ

    ರಾಮನಗರ: ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಸಹಚರರ ವಿರುದ್ಧ ಕಾರ್ಯಾಚರಣೆ ನಡೆಸಿ ಇಂದು ಮಧ್ಯಾಹ್ನ ವೇಳೆಗೆ ಬಂಧನ ಮಾಡಿರುವುದಾಗಿ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

    ಮಾ.31ರಂದು ಈ ಘಟನೆ ನಡೆದಿದ್ದು, ಪ್ರಕರಣ ಸಂಭಂಧ ಮೂರು ಎಫ್ಐಆರ್ ದಾಖಲಾಗಿತ್ತು. ಸತತ ಕಾರ್ಯಾಚರಣೆ ನಡೆಸಿ ಗುಜರಾತ್ ಹಾಗೂ ರಾಜಸ್ಥಾನ ಪೊಲೀಸರ ಸಹಾಯದಿಂದ ರಾಜಸ್ಥಾನದ ಗಡಿ ಜಿಲ್ಲೆಯಾದ ಬನಸ್ವಾರದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದರು.

    ಇದನ್ನೂ ಓದಿ: ಚಾಲಕರೇ ಎಚ್ಚರ; ನಿಮ್ಮ ಆಟೋದಲ್ಲಿರುವ ರಾಜಕೀಯ ಪಕ್ಷಗಳ ಪೋಸ್ಟರ್​ ತೆಗೆಯದಿದ್ದರೆ ಬೀಳಲಿದೆ ದಂಡ

    ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಫೋನ್ ಸ್ವಿಚ್ ಆಫ್ ಮಾಡಿ ರಾಜಾಸ್ಥಾನ ಜಿಲ್ಲೆಯಲ್ಲಿ ತಲೆ ಮರೆಸಿಕೊಂಡಿದ್ದರು. ಪ್ರಕರಣದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಪುನೀತ್ ಕೆರೆಹಳ್ಳಿ(A1), ಗೋಪಿ(A2), ಪವನ್ ಕುಮಾರ್(A3), ಪಿಲ್ಲಿಂಗ್ ಅಂಬಿಗಾರ್(A4), ಸುರೇಶ್ ಕುಮಾರ್(A5) ಬಂಧಿತ ಆರೋಪಿಗಳು. ನಾಳೆ ರಾಜಸ್ಥಾನ ಕೋರ್ಟ್​ನಿಂದ ಅನುಮತಿ ಪಡೆದು ರಾಮನಗರಕ್ಕೆ ಕರೆತರುತ್ತೇವೆ. ಪುನೀತ್ ಕೆರೆಹಳ್ಳಿ ವಿರುದ್ಧ ಈಗಾಗಲೇ 11ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಎಲ್ಲಾ ಪ್ರಕರಣಗಖ ಕುರಿತು ತನಿಖೆ ನಡೆಸಲಾಗುವುದು ಎಂದರು.

    ಇದನ್ನೂ ಓದಿ: ಗೃಹಪ್ರವೇಶಕ್ಕೆ ಸಿದ್ದವಾದ ಪ್ರವೀಣ್ ನೆಟ್ಟಾರು ಕನಸಿನ ಮನೆ

    ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಕಳೆದ ಮಾರ್ಚ್ 31 ರಂದು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್​ನಲ್ಲಿ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ. ಏಪ್ರಿಲ್ 1 ರಂದು ಕನಕಪುರ ತಾಲೂಕಿನ ಸಾತನೂರಿನಲ್ಲಿ ಮೃತದೇಹ ಪತ್ತೆಯಾಗಿತ್ತು. ಮಂಡ್ಯ ಜಿಲ್ಲೆಯ ಗುತ್ತಲು ನಿವಾಸಿ ಇದ್ರಿಸ್ ಪಾಷ(35) ಸಾವನ್ನಪ್ಪಿದ್ದ ವ್ಯಕ್ತಿ. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ದೂರು ನೀಡಿದ್ದ. ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ತಲೆ ಮರೆಸಿಕೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts