More

    ಮಂಗಳೂರು ಎಸ್‌ಪಿ ಕಚೇರಿ ಸ್ಥಳಾಂತರ ಇಲ್ಲ!, ವಿಧಾನಸಭೆಯಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

    ಪುತ್ತೂರು: ಮಂಗಳೂರು ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿವ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯು ಇಲಾಖೆಯ ಪರಿಶೀಲನೆಯಲ್ಲಿರುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಕಾರ್ಯವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ ತಾಲೂಕುಗಳ ಕಾನೂನು ಸುವ್ಯವಸ್ಥೆ ಹಾಗೂ ಕಾರ್ಯಕ್ಷಮತೆ ದೃಷ್ಟಿಯಿಂದ ಪುತ್ತೂರು ನಗರ ಅಥವಾ ತಾಲ್ಲೂಕಿನ ವ್ಯಾಪ್ತಿಗೆ ಪೊಲೀಸ್‌ಅಧೀಕ್ಷಕರ ಕಚೇರಿಯನ್ನು ಸ್ಥಳಾಂತರಿಸುವ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬ ಶಾಸಕ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ಹಾಗೂ ತಾಲೂಕುಗಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪುತ್ತೂರಿನಲ್ಲಿ ಈಗಾಗಲೇ ಪೊಲೀಸ್ ಉಪಾಧೀಕ್ಷಕರ ಕಚೇರಿಯು ಕಾರ್ಯನಿರ್ವಹಿಸುತ್ತಿದೆ ಹಾಗೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿಗೆ ಸಂಬಂಧಪಟ್ಟಂತೆ ಬಂಟ್ವಾಳದಲ್ಲಿ ಪೊಲೀಸ್ ಉಪಾಧೀಕ್ಷಕರ ಕಚೇರಿಯು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.
    ಕುಮ್ಮಿ ಹಕ್ಕಿಗಾಗಿ ಸಚಿವ ಸಂಪುಟ ಉಪ ಸಮಿತಿ ರಚನೆ
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣೆ, ಬಾಣೆ, ಕುಮ್ಮಿ, ಸೊಪ್ಪಿನ ಬೆಟ್ಟ ಮುಂತಾದ ಭಾಗದ ಜಾಗಗಳಲ್ಲಿ ರೈತರು ಸ್ವಾಧೀನದಲ್ಲಿ ಅನುಭವಿ ಸುತ್ತಿರುವ ಜಾಗಗಳನ್ನು ಅದರ ಸ್ವಾಧೀನದಾರರಿಗೆ ಸಕ್ರಮೀಕರಣ ಮಾಡುವ ಪ್ರಸ್ತಾವನೆ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್ ಅಶೋಕ್, ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನಬೆಟ್ಟ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡುವ ಕುರಿತು ಒಂದು ನೀತಿಯನ್ನು ರೂಪಿಸಲು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ತೀರ್ಮಾನದಂತೆ ಮುಂದಿನ ಕ್ರಮವಹಿಸಲಾಗುತ್ತದೆ ಎಂದು ಉತ್ತರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts