More

    ಅಪರಾಧ ಕೃತ್ಯಗಳಿಗೆ ಸಹಕರಿಸಿದರೆ ತಕ್ಕ ಶಾಸ್ತಿ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಎಚ್ಚರಿಕೆ

    ವಿಜಯವಾಣಿ ಸುದ್ದಿಜಾಲ ಆನೇಕಲ್
    ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡುವವರ ವಿರುದ್ಧ ತಕ್ಕ ಪಾಠ ಕಲಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಹೇಳಿದರು.
    ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಚಂದಾಪುರದಲ್ಲಿ ವಿವಿಧ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ಬಳಿಕ ಮಾತನಾಡಿದರು. ಅಂಗಡಿ ಮಾಲೀಕರು ಕಡ್ಡಾಯವಾಗಿ ಮಳಿಗೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಕೆಲವರು ರೌಡಿಗಳ ಜತೆ ಸಂಪರ್ಕದಲ್ಲಿದ್ದು, ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎನ್ನುವ ಮಾಹಿತಿ ಇಲಾಖೆಗೆ ಬಂದಿದೆ. ಈಗಾಗಲೇ ಇಂತಹ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು, ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
    ಅಂಗಡಿಗಳಿಗೆ ಬಂದು ರೌಡಿಗಳ ಹೆಸರನ್ನು ಹೇಳಿ ಹಣಕ್ಕೆ ಬೇಡಿಕೆ ಇಡುವುದು ಪೊಲೀಸರ ಗಮನಕ್ಕೆ ಬಂದರೆ ಅಂತಹ ಸಮಾಜಘಾತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದ ಅವರು, ಪೊಲೀಸರು ನೇರವಾಗಿ ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮ ಚಂದಾಪುರದಿಂದ ಪ್ರಾರಂಭವಾಗಿದ್ದು, ಇದು ಮುಂದಿನ ದಿನಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯಲಿದೆ ಎಂದರು.
    ಚಂದಾಪುರದಲ್ಲಿ ಟ್ರಾಫಿಕ್ ಸಮಸ್ಯೆ, ಕಳ್ಳತನ ಪ್ರಕರಣ, ವಿದ್ಯುತ್ ವ್ಯವಸ್ಥೆ ಮತ್ತು ಮೂಲ ಸೌಲಭ್ಯ ಸಮಸ್ಯೆಗಳಿದ್ದು, ಕೂಡಲೇ ಪೊಲೀಸ್ ಇಲಾಖೆ ವ್ಯಾಪ್ತಿಯ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts