

ನವದೆಹಲಿ: ಸ್ಪೇನ್‌ನ ಆಟಗಾರ್ತಿ ಜೆನ್ನಿಫರ್ ಹೆರ್ಮೊಸೊ ಅವರಿಗೆ ಸ್ಪೇನ್ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಲೂಯಿಸ್ ರುಬಿಯಾಲೆಸ್ ವೇದಿಕೆಯಲ್ಲೇ ಚುಂಬಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಪೇನ್ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಲೂಯಿಸ್ ರುಬಿಯಾಲೆಸ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮಹಿಳಾ ಫುಟ್ಬಾಲ್ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ತಂಡ ಗೆದ್ದ ಬಳಿಕ ಸಂಭ್ರಮಾಚರಣೆ ವೇಳೆ ಆಟಗಾರ್ತಿಗೆ ಸ್ಪೇನ್ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಲೂಯಿಸ್ ರುಬಿಯಾಲೆಸ್ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗಿತ್ತು
ವಿಡಿಯೋದಲ್ಲಿ ಏನಿದೆ?: ಟ್ರೋಫಿ ವಿತರಣೆ ಸಂದರ್ಭ ಸ್ಪೇನ್‌ನ ಜೆನ್ನಿಫರ್ ಹೆರ್ಮೊಸೊ ಅವರಿಗೆ ವೇದಿಕೆಯಲ್ಲೇ ಲೂಯಿಸ್ ತುಟಿಗೆ ಚುಂಬಿಸಿದ್ದು, ಆ ಸನ್ನಿವೇಶದ ವಿಡಿಯೋ ವೈರಲ್ ಆಗಿದೆ.
ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆನ್ನಿಫರ್, ಲೂಯಿಸ್ ನಡೆ ತಮಗೆ ಇಷ್ಟವಾಗಲಿಲ್ಲ ಎಂದಿದ್ದಾರೆ. ನಂತರ ಸ್ಪೇನ್ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಲೂಯಿಸ್ ರುಬಿಯಾಲೆಸ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.