More

    ಬಹುಕೋಟಿ ರೂ. ವಕ್ಫ್ ಆಸ್ತಿ ಅಕ್ರಮ; ವರದಿ ಮಂಡನೆಗೆ ಸೂಚನೆ ನೀಡಿದ ವಿಧಾನ ಪರಿಷತ್​ ಸಭಾಪತಿ..!

    ಬೆಳಗಾವಿ: ರಾಜ್ಯದಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಹಾಗೂ ಒತ್ತುವರಿ ಅಕ್ರಮದ ಬಗ್ಗೆ ವರದಿಯನ್ನು ಸದನದಲ್ಲಿ ಮಂಡಿಸಲು ಸರ್ಕಾರಕ್ಕೆ ಸೂಚಿಸಿರುವೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ತಿಳಿಸಿದರು.

    ಚಳಿಗಾಲದ ಅಧಿವೇಶನದ ಸಿದ್ಧತೆ ಕುರಿತು ಮಾಹಿತಿ ನೀಡಲೆಂದು ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿ‌ಯಲ್ಲಿ ಪ್ರತಿಕ್ರಿಯಿಸಿದ ಅವರು ಕಳೆದ‌ ಅಧಿವೇಶನದಲ್ಲಿ ಸದಸ್ಯರೊಬ್ಬರು ಈ ವರದಿ ಬಗ್ಗೆ ಪ್ರಸ್ತಾಪಿಸಿದ್ದು ಸರಿಯಲ್ಲ. ಸಂಬಂಧಿಸಿದ ಸದಸ್ಯರ ಗಮನಕ್ಕೆ ತರಲಾಗಿದೆ ಎಂದರು.

    ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವಧಿಯಲ್ಲಿ ವಕ್ಫ್ ಆಸ್ತಿ ಅಕ್ತಮದ ಬಗ್ಗೆ ತಪಾಸಣೆ ನಡೆಸಿ, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಇಲ್ಲವೇ ಒತ್ತುವರಿಯಾಗಿದ್ದನ್ನು ಪತ್ತೆ‌ ಹಚ್ಚಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

    14 ವಿಧೇಯಕಗಳು
    ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ14 ವಿಧೇಯಕಗಳು ಮಂಡನೆಯಾಗಲಿವೆ. ಸದಸ್ಯರು ಒಟ್ಟು1457 ಪ್ರಶ್ನೆಗಳನ್ನು ಕೇಳಿದ್ದು ಚುಕ್ಕೆ ಗುರುತು ಹಾಗೂ ಲಿಖಿತರೂಪದ ಉತ್ತರ ನೀಡಲಾಗುವುದು ಮಲ್ಕಾಪುರೆ ಮಾಹಿತಿ ನೀಡಿದರು.

    ಸಾರ್ವಜನಿಕ ಮಹತ್ವದ ತುರ್ತು ವಿಷಯವಾಗಿ ನಿಯಮ 330ರಡಿ 51 ಅರ್ಜಿಗಳು ಸಲ್ಲಿಕೆಯಾಗಿವೆ. ಆಡಳಿತ ಪಕ್ಷದಷ್ಟೇ ಪ್ರತಿಪಕ್ಷಗಳಿಗೂ ಜವಾಬ್ದಾರಿಯಿದ್ದು, ಎಲ್ಲರನ್ನೂ ಸಮಾನವಾಗಿ ಕಾಣುವೆ ಎಂದರು.

    ಎನ್.ರವಿಕುಮಾರ್ ಹಾಗೂ ಯು.ಬಿ.ವೆಂಕಟೇಶ್ ಅವರು ತಲಾ ಒಂದು ಖಾಸಗಿ ನಿರ್ಣಯದ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ತೀರ್ಮಾನಿಸುವೆ. ಭಾವನಾತ್ಮಕ ಅಥವಾ ಅನ್ಯವಿಚಾರಗಳ ಕುರಿತು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ‌ ನಿರ್ಧರಿಸಲಾಗುವುದು ಎಂದು ರಘುನಾಥ್ ರಾವ್ ಮಲ್ಕಾಪುರೆ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts