17 C
Bangalore
Friday, December 13, 2019

ಪಕ್ಷಾಂತರ ನಿಷೇಧ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಉಮೇಶ್​ ಜಾಧವ್​ಗೆ ಸ್ಪೀಕರ್​ ನೋಟಿಸ್​

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಬೆಂಗಳೂರು: ಗುರುವಾರ ಬಿಡುಗಡೆಯಾಗಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕಲಬುರಗಿ ಎಸ್​ಸಿ ಕ್ಷೇತ್ರದಿಂದ ಸ್ಪರ್ಧಿಸಲು ಉಮೇಶ್​ ಜಾಧವ್​ಗೆ ಟಿಕೆಟ್​ ದೊರೆತಿದೆ. ಆದರೆ ಈ ಸಂತಸ ತುಂಬಾ ಕಾಲ ಉಳಿಯಲಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ ನೋಟಿಸ್​ ಜಾರಿ ಮಾಡಿರುವುದು ಇದಕ್ಕೆ ಕಾರಣ.

ಕಾಂಗ್ರೆಸ್​ನಿಂದ ಆಯ್ಕೆಯಾಗಿ ಶಾಸಕರಾಗಿದ್ದ ಉಮೇಶ್​ ಜಾಧವ್​ ಪಕ್ಷದ ವಿರುದ್ಧ ಬಂಡಾಯ ಎದ್ದು, ಬಿಜೆಪಿ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರು. ರಮೇಶ್​ ಜಾರಕಿಹೊಳಿ ನೇತೃತ್ವದಲ್ಲಿ ಮುಂಬೈಗೆ ಹೋಗಿದ್ದ ಕಾಂಗ್ರೆಸ್​ನ ಭಿನ್ನಮತೀಯ ಶಾಸಕರ ಜತೆ ತಮ್ಮನ್ನು ಗುರುತಿಸಿಕೊಂಡಿದ್ದರು.

ಬಜೆಟ್​ ಅಧಿವೇಶನಕ್ಕೂ ಮುನ್ನ ನಡೆದಿದ್ದ ಕಾಂಗ್ರೆಸ್​ನ ಶಾಸಕಾಂಗ ಪಕ್ಷದ ಸಭೆಗೆ ಹಾಗೂ ಬಜೆಟ್​ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ವಿಪ್​ ಜಾರಿ ಮಾಡಿದ್ದರೂ, ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರು. ಕೊನೆಗೆ ಪಕ್ಷಾಂತರ ಕಾಯ್ದೆಯಡಿ ಉಮೇಶ್​ ಜಾಧವ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್​ ಸದಸ್ಯ ಪಿ.ಆರ್​. ರಮೇಶ್​ ವಿಧಾನಸಭಾಧ್ಯಕ್ಷರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಮೇಶ್​ ಜಾಧವ್​ ಮತ್ತಿತರ ಭಿನ್ನಮತೀಯ ಶಾಸಕರು ಬಜೆಟ್​ ಅಧಿವೇಶನದ ಕೊನೆಯ ದಿನ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.

ಅಧಿವೇಶನ ಮುಗಿದ ಬಳಿಕ ಉಮೇಶ್​ ಜಾಧವ್​ ಕೋಲಾರದಲ್ಲಿ ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜತೆಗೆ, ಕಲಬುರಗಿ ಎಸ್​ಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲು ಟಿಕೆಟ್​ ದೊರೆತಿದೆ. ಈ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ತಾವು ದಾಖಲಿಸಿರುವ ದೂರಿನ ವಿಚಾರಣೆ ಪೂರ್ಣಗೊಳ್ಳುವ ಮೊದಲೇ ಬಿಜೆಪಿಯಿಂದ ಇವರಿಗೆ ಟಿಕೆಟ್​ ದೊರೆತಿರುವ ಕುರಿತು ತ್ವರಿತವಾಗಿ ವಿಚಾರಣೆ ನಡೆಸುವಂತೆ ಪಿ.ಆರ್​. ರಮೇಶ್​ ವಿಧಾನ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಮೇಶ್​​ ಜಾಧವ್​ಗೆ ನೋಟಿಸ್​ ಜಾರಿಯಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...