17.8 C
Bengaluru
Wednesday, January 22, 2020

ರಾಜ್ಯದಲ್ಲಿ 17 ವಿಶೇಷ ನ್ಯಾಯಾಲಯ: ಸಚಿವ ಜೆ.ಸಿ.ಮಾಧುಸ್ವಾಮಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಪುತ್ತೂರು: ರಾಜ್ಯದಲ್ಲಿ 17ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸಿಗ್ನೇಶನ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ವಿಶೇಷ ಪ್ರಕರಣಗಳ ವಿಲೇವಾರಿ ನಿಟ್ಟಿನಲ್ಲಿ ಪುತ್ತೂರಿನಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.

ಶನಿವಾರ ಪುತ್ತೂರು ನ್ಯಾಯಾಲಯದ ಪರಾಶರ ಸಭಾಂಗಣದಲ್ಲಿ ಏರ್ಪಡಿಸಲಾದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
200 ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕ ಬೇಡಿಕೆಯಿದ್ದು, ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಲು ಪ್ರಯತ್ನಿಸಲಾಗುವುದು. ವಕೀಲರ ಗೌರವಧನವನ್ನು 2024 ರೂ.ಗಳಿಂದ 5 ಸಾವಿರ ರೂ.ಗೆ ಏರಿಸುವ ಚಿಂತನೆ ಇದೆ ಎಂದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ, ಕಾನೂನು ಇಲಾಖೆ ವಿಶೇಷ ಕಾರ್ಯದರ್ಶಿ ಎಚ್.ಕೆ.ಜಗದೀಶ್, 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಪಿರೇರ, ತಿಪಟೂರು ಶಾಸಕ ನಾಗೇಶ್, ಪುತ್ತೂರು ವಕೀಲರ ಸಂಘದ ಕೋಶಾಧಿಕಾರಿ ದಿವ್ಯರಾಜ್ ಹೆಗ್ಡೆ, ಜತೆ ಕಾರ್ಯದರ್ಶಿ ಮಮತಾ ಬಿ. ಸುವರ್ಣ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಸುರೇಶ್ ಪಡ್ಡಂಬೈಲು ಸ್ವಾಗತಿಸಿದರು. ಕಾರ್ಯದರ್ಶಿ ಮಂಜುನಾಥ ಎನ್.ಎಸ್. ವಂದಿಸಿದರು. ವಕೀಲ ಮಹೇಶ್ ಕಜೆ ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು ಜಿಲ್ಲೆ ರಚನೆಗೆ ಸಹಕಾರ
ನಾಲ್ವರು ಶಾಸಕರ ವ್ಯಾಪ್ತಿಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ಹಾಗೂ ವಿಟ್ಲ ತಾಲೂಗಳಲ್ಲಿ 2011ರಲ್ಲಿದ್ದ ಎಂಟು ಲಕ್ಷ ಜನಸಂಖ್ಯೆ ಈಗ 11 ಲಕ್ಷಕ್ಕೆ ಏರಿದೆ. ಪುತ್ತೂರಿಗೆ ಜಿಲ್ಲೆಯ ಅರ್ಹತೆಗಳಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಬೇಡಿಕೆ ಮುಂದಿಟ್ಟರು. ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಪ್ರತ್ಯೇಕ ಜಿಲ್ಲೆ ಸ್ಥಾಪಿಸುವ ವಿಚಾರ ಶಾಸಕರಿಗೆ ಬಿಟ್ಟದ್ದು, ಕಾನೂನು ಇಲಾಖೆಯಿಂದ ಅಗತ್ಯ ನೆರವು ನೀಡಲಾಗುವುದು ಎಂದರು.

ತ್ವರಿತ ವಿಚಾರಣೆ ಅಗತ್ಯ
ಯಾವುದೋ ಪ್ರಕರಣದ ಆರೋಪಿಗಳನ್ನು ವಿಚಾರಣೆಗೂ ಮುನ್ನ ಎನ್‌ಕೌಂಟರ್ ನಡೆಸಿದಾಗ, ನ್ಯಾಯ ಸಿಕ್ಕಿದೆ ಎಂಬುದಾಗಿ ಸಂಭ್ರಮಿಸುವ ಕಾಲಘಟ್ಟಕ್ಕೆ ನಾವು ತಲುಪಿದ್ದೇವೆ ಎಂದರೆ ಸಮಾಜ ಕಾನೂನು ವ್ಯವಸ್ಥೆ, ಕೋರ್ಟ್‌ಗಳ ಮೇಲೆ ನಂಬಿಕೆ ಕಳೆದುಕೊಂಡಿದೆ ಎಂದು ಅರ್ಥೈಸಬಹುದು. ಈ ಕಾರಣಕ್ಕಾಗಿ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಕಾರ್ಯ ನಡೆಯುತ್ತಿದೆ ಎಂದು ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪೋಕ್ಸೋ ಕುರಿತ ಕಾರ್ಯಾಗಾರದಲ್ಲಿ ಮಾಧುಸ್ವಾಮಿ ಹೇಳಿದರು. ದೊಡ್ಡಮಟ್ಟದ ಅಪರಾಧ ಪ್ರಕರಣಗಳಿಗೂ ಐಪಿಸಿ ಪ್ರಕಾರ ಕೇವಲ 1 ಸಾವಿರ ರೂ. ದಂಡ ಕಟ್ಟಿದರೆ ಸಾಕು ಎಂದಿರುವುದನ್ನೂ ಬದಲಿಸಬೇಕಿದೆ ಎಂದರು.

ಎತ್ತಿನಹೊಳೆ ನೀರು ಕೊಡಿ: ಉಪ್ಪಿನಂಗಡಿ ಗ್ರಾಮದ ನಾಲಾಯಗುಂಡಿ ಎಂಬಲ್ಲಿ ಕಿರು ಹೊಳೆಗೆ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಉದ್ಘಾಟಿಸಿದ ಸಚಿವರು, ಸಮೃದ್ಧ ಜಲರಾಶಿ ಹೊಂದಿರುವ ಕರಾವಳಿ ಜಿಲ್ಲೆಯ ಜನ ಅದೃಷ್ಟವಂತರು. ನೀರಿಗಾಗಿ ದಿನನಿತ್ಯ ಸಂಕಷ್ಟ ಪಡುತ್ತಿರುವ ಘಟ್ಟದ ಮೇಲಿನವರಿಗೆ ಸ್ವಲ್ಪ ನೀರು ಹರಿಯುವಂತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಎತ್ತಿನಹೊಳೆ ಯೋಜನೆಗೆ ಸಹಕರಿಸಿ ಎಂದು ಪರೋಕ್ಷವಾಗಿ ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...