More

    ‘ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ’

    ಮಡಿಕೇರಿ:

    ಸೋಮವಾರಪೇಟೆ ತಾಲೂಕ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಬಾಲಕಿ ಮೀನಾ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು. ಹತ್ಯೆಗೀಡಾಗ ಬಾಲಕಿ ಮನೆಗೆ ಗುರುವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೊಂದು ಭೀಕರ ಘಟನೆ. ಮನುಷ್ಯರು ಯಾರೂ ಒಪ್ಪದಂತಹ ಘಟನೆ. ಇಂತಹ ಘಟನೆ ನಡೆಯಬಾರದಿತ್ತು. ಈ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ನೇಮಕ ಮಾಡಲಾಗುವುದು. ಚುನಾವಣಾ ನೀತಿ ಸಂಹಿತೆ ಮುಗಿದ ಕೂಡಲೇ ಸಂತ್ರಸ್ತ ಕುಟುಂಬದವರಿಗೆ ಪರಿಹಾರ ನೀಡಲಾಗುವುದು ಎಂದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನರು ಕಾನೂನು ಕೈಗೆತ್ತಿಕೊಳ್ಳುತ್ತಿದ್ದಾರೆ. ಈ ಕೊಲೆಗಳು ಪೂರ್ವಯೋಜಿತವಾಗಿರದೇ ಆ ಕ್ಷಣಕ್ಕೆ ಮಾಡಿದ ಕೃತ್ಯ ಎಂದು ಅನ್ನಿಸುತ್ತದೆ. ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಅಂಕಿಸAಖ್ಯೆಗಳನ್ನು ಹೊರಗಿಡುವೆ. ನನಗೆ ಅವರ ಪ್ರಮಾಣ ಪತ್ರ ಬೇಕಿಲ್ಲ ಎಂದು ಪ್ರತಿಕ್ರಿಯಿಸಿದರು.

    ಹುಬ್ಬಳ್ಳಿಯಲ್ಲಿ ನಡೆದಿರುವ ಕೊಲೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈಗ ಇಲ್ಲಿನ ಕೃತ್ಯಗಳ ಬಗ್ಗೆ ಮಾತನಾಡಿ, ಅಲ್ಲಿಯ ವಿಚಾರಗಳ ಕುರಿತ ಪ್ರಶ್ನೆಗಳು ಬೇಡ ಎಂದರು. ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ ಐ ಟಿ ತನಿಖೆ ಕುರಿತ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಸಿಡಿಮಿಡಿಗೊಂಡ ಪರಮೇಶ್ವರ್ ಇಲ್ಲಿಯ ವಿಚಾರಗಳನ್ನು ಕುರಿತು ಮಾತ್ರ ಕೇಳಿ ಎಂದರು. ಸುದ್ದಿಗಾರರು ಮತ್ತೆ ಪ್ರಶ್ನಿಸಿದಾಗ ಅವರು ಇನ್ನಷ್ಟು ಕೆರಳಿ, ನನಗೆ ನೀವು ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯ ಮಾಡುವಂತಿಲ್ಲ. ಹೀಗೆಲ್ಲ ನೀವು ಒತ್ತಾಯ ಮಾಡಬಾರದು. ನಾನು ಉತ್ತರಿಸುವುದಿಲ್ಲ ಎಂದು ಹೇಳಿ ನಿರ್ಗಮಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts