More

    ವಿಶೇಷ ಅನುದಾನ ಬಿಡುಗಡೆ ಮಾಡಿ – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

    ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಳೆದ ಬಾರಿಯ ಪ್ರವಾಹದ ಪರಿಹಾರವಿನ್ನೂ ಬಾಕಿ ಇರುವಾಗಲೇ ಈ ಬಾರಿ ಮತ್ತೆ ಪ್ರವಾಹ ಅಪ್ಪಳಿಸಿದೆ. ಹಾಗಾಗಿ ಬಾಕಿ ಪರಿಹಾರದ ಜತೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

    ನಗರದ ಸಾಂಬ್ರಾ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಅತಿವೃಷ್ಟಿ ಕುರಿತು ಬೆಳಗಾವಿ ಮತ್ತು ಧಾರವಾಡ ಜಿಲ್ಲಾ ಜನಪ್ರತಿನಿಧಿಗಳ ಸಭೆಯಲ್ಲಿ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ವರ್ಷ ಅತಿವೃಷ್ಟಿ ಸಂಭವಿಸಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. 2019-20ನೇ ಸಾಲಿನಲ್ಲಿ ಸುರಿದ ಮಳೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಮನೆ ಕುಸಿದಿದ್ದು, ಅದರಲ್ಲಿ ಸುಮಾರು 1000 ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. ಬಾಕಿ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಕೋರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts