ಹೆಣ್ಣು ಮಕ್ಕಳ ರಕ್ಷಣೆಗೆ ವಿಶೇಷ ಕಾನೂನು

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿಹಿಡಿಯುವ ಜತೆಗೆ ಸಂವಿಧಾನದಲ್ಲಿ ವಿಶೇಷ ಕಾನೂನುಗಳನ್ನು ರೂಪಿಸಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಪಿ.ದೇವಮಾನೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ರಕ್ಷಿಸುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಕಾನೂನು ಅರಿವು ಮತ್ತು ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರ ಮೊದಲ ಆದ್ಯತೆ ನೀಡಿದೆ. ಕಾರ್ಮಿಕರು, ಪರಿಶಿಷ್ಟರು, ಪ್ರಕೃತಿ ವಿಕೋಪಕ್ಕೆ ಒಳಗಾದವರು ಹಾಗೂ 1ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರಿಗೆ ಸರ್ಕಾರದ ಖರ್ಚಿನಲ್ಲಿ ವಕೀಲರನ್ನು ನೇಮಿಸಿ ಉಚಿತವಾಗಿ ಕಾನೂನಿನ ನೆರವು ನೀಡಲಾಗುತ್ತದೆ ಎಂದರು.

ಪ್ರಾಂಶುಪಾಲ ಜಿ.ಎಚ್.ಮಹದೇವಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಕೆ.ಪದ್ಮಾ, ವಕೀಲೆ ಎಂ.ಎಸ್.ಸಾವಿತ್ರಿ, ಡಾ.ಎಸ್.ಮಂಜು, ರಕ್ಷಣಾ ಅಧಿಕಾರಿ ಗೀತಾಲಕ್ಷ್ಮೀ, ಮಂಜುಳಾ ಪಾಟೀಲ್ ಇದ್ದರು.

Leave a Reply

Your email address will not be published. Required fields are marked *