

ಕಾರ್ಕಳ: ಪ್ರತಿ ಹಂತದಲ್ಲೂ ವಿದ್ಯಾರ್ಥಿಗಳಿಗೆ ಒತ್ತಡ ಕಾಡುತ್ತದೆ. ಇದಕ್ಕೆ ಸೂಕ್ತ ನಿವಾರಣೆ ಅಗತ್ಯವಿದ್ದು, ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳ ಕಲಿಕಾ ಜೀವನ ಅಸ್ತವ್ಯಸ್ತವಾಗುತ್ತದೆ ಎಂದು ಮನೋ ವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು.
ನಿಟ್ಟೆ ಜಸ್ಟೀಸ್ ಕೆ.ಎಸ್ ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯ ಎಂಬಿಎಂ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಸಮತೋಲಿತ ಜೀವನ ಶೈಲಿ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಪ್ರಾಧ್ಯಾಪಕ ಡಾ.ಸುಧೀರ್ ರಾಜ್ ಕೆ, ಪ್ರಭಾರ ನಿರ್ದೇಶಕ ಡಾ.ಸುಧೀರ್ ಎಂ. ಉಪಸ್ಥಿತರಿದ್ದರು. ಪ್ರೊ.ಕಾರ್ತಿಕ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.