ಶಿಸ್ತು, ಒಗ್ಗಟ್ಟು, ಮಾನವೀಯತೆಯ ಪಾಠ : ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಮತ

New Project (13)
Published on

ಮೂಡುಬಿದಿರೆ: ಎನ್‌ಎಸ್‌ಎಸ್ ಐವತ್ತು ವರ್ಷಗಳ ಸಮೃದ್ಧ ಇತಿಹಾಸದ ಮೂಲಕ, ಲಕ್ಷಾಂತರ ಯುವಕರಲ್ಲಿ ಸೇವಾ ಮನೋಭಾವ ಬೆಳೆಸಿದ ಮಹತ್ವದ ಚಳವಳಿ. ಎನ್‌ಎಸ್‌ಎಸ್ ಶಿಬಿರಗಳು ಶ್ರಮದಾನಕ್ಕೆ ಮಾತ್ರ ಸೀಮಿತವಲ್ಲ, ಶಿಸ್ತು, ಒಗ್ಗಟ್ಟು ಹಾಗೂ ಮಾನವೀಯತೆಯ ಪಾಠ ಕಲಿಸುತ್ತವೆ. ಶಿಬಿರಗಳಲ್ಲಿ ಭೇದವಿಲ್ಲದೆ ಎಲ್ಲರೂ ಸಮಾನ ಮನೋಭಾವದಿಂದ ಸೇವೆಯಲ್ಲಿ ತೊಡಗುವುದು, ಸಂವಿಧಾನದ ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯ ಅಳವಡಿಸಿಕೊಂಡಂತೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಡಾ.ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ) ಸಹಯೋಗದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜಿನ ಕನ್ನಡ ಉಪನ್ಯಾಸಕ ಧರ್ಮೇಂದ್ರ ಕುದ್ರೋಳಿ ಅಧ್ಯಕ್ಷತೆ ವಹಿಸಿದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಮೇಘನಾ ಇದ್ದರು. ವಿದ್ಯಾರ್ಥಿ ವಿಕಾಸ್ ಶೆಟ್ಟಿ ಸ್ವಾಗತಿಸಿದರು. ಶಟಸ್ಥಳ ವಂದಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಭಾತ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net