'ನೀನೇ ರಾಜಕುಮಾರ' ಕಾರ್ಯಕ್ರಮದಲ್ಲಿ ಗಾಯಕ ವಿಜಯ್ ಪ್ರಕಾಶ್ ಅವರ ಜೊತೆಗೆ ಗಾಯಕಿ ಅನುರಾಧ ಭಟ್, ಮೇಘನಾ ಭಟ್, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ಮಾಡಿಲಿದ್ದಾರಂತೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಆನ್ಲೈನ್ನಲ್ಲಿ ಟಿಕೆಟ್ ಬುಕಿಂಗ್ ಮಾಡಿಕೊಳ್ಳಲು ವ್ಯವಸ್ಥೆಯನ್ನು ಮಾಡಲಾಗಿದೆ. ಅಪ್ಪು ಅವರ ಸ್ಮರಣಾರ್ಥ ವಿಜಯ ಪ್ರಕಾಶ್ ಈಗಾಗಲೇ ಹಲವು ಕಾರ್ಯಕ್ರಮಗಳಲ್ಲಿ ಹಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇನ್ನು, ಈ ಕಾರ್ಯಕ್ರಮದಲ್ಲಿ ದುಬೈನ ಹಲವು ಉದ್ಯಮಿಗಳು, ಕನ್ನಡ ಚಿತ್ರರಂಗದವರು, ಅಪ್ಪು ಅಭಿಮಾನಿಗಳು, ದುಬೈನ ಕನ್ನಡಿಗರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.