More

    ರಾಮಮಂದಿರ ಉದ್ಘಾಟನೆಯಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ: ಸಚಿವ ರಾಮಲಿಂಗಾರೆಡ್ಡಿ

    ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್​ ಸರ್ಕಾರವು ರಾಮಮಂದಿರ ಉದ್ಘಾಟನೆಯ ಅಂಗವಾಗಿ ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸೂಚಿಸಿದೆ.

    ಈ ಕುರಿತು ಆದೇಶ ಹೊರಡಿಸಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್​ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ

    ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts