

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಭಾರತಕ್ಕೆ ಸಮರ್ಥ ನಾಯಕ ಸಿಕ್ಕಿರುವುದು ನಮ್ಮ ಭಾಗ್ಯ. ಮೋದಿ ಅವರಿಗೆ ಭಗವಂತ ಇನ್ನಷ್ಟು ಆಯುಷ್ಯ ಹಾಗೂ ಆರೋಗ್ಯ ಕರುಣಿಸಲು ಬಿಜೆಪಿ ಕಾರ್ಯಕರ್ತರ ಪರವಾಗಿ ಪುಣ್ಯಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಇದರ ಪುಣ್ಯದ ಫಲ ಪ್ರಧಾನಿಗೆ ಸಿಗುವಂತಾಗಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ಮಂಗಳವಾರ ಅಸೋಡು ಗೋಶಾಲೆಯಲ್ಲಿ ಗೋವಿಗಾಗಿ ಮೇವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ ಕುಂದಾಪುರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯಾನ್, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಮಂಡಲ ಉಪಾಧ್ಯಕ್ಷರಾದ ಸುನೀಲ್ ಶೆಟ್ಟಿ ಹೇರಿಕುದ್ರು, ರೂಪಾ ಬಾಬು ಪೈ, ಕಾರ್ಯದರ್ಶಿ ನೇತ್ರಾವತಿ ಮಡಿವಾಳ, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೋಹಿಣಿ ಪೈ, ಸ್ಮಿತಾ ಕೃಷ್ಣಮೂರ್ತಿ, ಕಾಳವಾರ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುಖಾನಂದ ಹೆಗ್ಡೆ ಉಪಸ್ಥಿತರಿದ್ದರು.