ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಅ.10ರಂದು ವಿಶಾಲಾಕ್ಷಿ ಅಮ್ಮನವರಿಗೆ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ನವದುರ್ಗಿಯರ ವೇಷಭೂಷಣ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ಪುರೋಹಿತ ಹೇಳಿದ್ದಾರೆ.
ಸಂಜೆ 6 ಗಂಟೆಗೆ ನವದುರ್ಗಿಯ ವೇಷ ಭೂಷಣ ಹಾಗೂ ನೃತ್ಯ ಪ್ರಾರಂಭವಾಗುತ್ತದೆ, ನೃತ್ಯ ಕಾರ್ಯಕ್ರಮದಲ್ಲಿ ಮದ್ದೂರಿನ ಹೆಸರಾಂತ ಡಾನ್ಸ್ ಶಾಲೆಯ ವಿದ್ಯಾರ್ಥಿಗಳು ನೃತ್ಯ ಮಾಡಲಿದ್ದಾರೆ. ರಾತ್ರಿ 8 ಗಂಟೆಗೆ ಶಿವ ಪಾರ್ವತಿ ಉತ್ಸವ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಂತರ ಮಹಾಮಂಗಳಾರತಿ ಮಾಡಿ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.