24.9 C
Bangalore
Wednesday, December 11, 2019

ಅರಣ್ಯ ಇಲಾಖೆ ಸುಪರ್ದಿಗೆ ಲುಂಬಿನಿ ಗಾರ್ಡನ್

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

| ಸತೀಶ್ ಕೆ.ಬಳ್ಳಾರಿ ಬೆಂಗಳೂರು

ನಾಗವಾರ ಕೆರೆಯನ್ನು ಅಭಿವೃದ್ಧಿ ಮಾಡಿ ಹೊಸ ರೂಪ ಕೊಟ್ಟಿದ್ದ ಲುಂಬಿನಿ ಗಾರ್ಡನ್ ಸಂಸ್ಥೆಯ 15 ವರ್ಷಗಳ ಗುತ್ತಿಗೆ ಅವಧಿ ಮುಗಿದಿದ್ದು, ಕಳೆದ ನ. 27ರಿಂದ ಕೆರೆಯನ್ನು ಅರಣ್ಯ ಇಲಾಖೆ ತನ್ನ ಸುಪರ್ದಿಗೆ ಪಡೆದುಕೊಂಡಿದೆ. 2004ರಲ್ಲಿ ಕೆರೆ ಅಭಿವೃದ್ಧಿಗೊಳಿಸುವುದಾಗಿ ಗುತ್ತಿಗೆ ಪಡೆದ ಲುಂಬಿನಿ ಸಂಸ್ಥೆ ವ್ಯಾಪಾರಿ ಸ್ವರೂಪ ಕೊಟ್ಟಿತ್ತು. ಸಾರ್ವಜನಿಕರಿಗೆ ಮುಕ್ತವಾಗಿ ಕೆರೆ ಆವರಣ ಪ್ರವೇಶ ಮಾಡುವುದನ್ನೇ ನಿಷೇಧಿಸಿತ್ತು. ಕೆರೆ ಆವರಣಕ್ಕೆ ಪ್ರವೇಶ, ಬೋಟಿಂಗ್, ಕೃತಕ ಅಲೆಯೊಂದಿಗೆ ಆಟ, ಬೋಟ್ ರೆಸ್ಟೋರೆಂಟ್​ಗಳ ಬಳಕೆಗೆ ಟಿಕೆಟ್ ರೂಪದಲ್ಲಿ ಹಣ ವಸೂಲಿ ಮಾಡುತ್ತಿತ್ತು. ಆದರೆ ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಭಾಗಶಃ ವಿಫಲವಾಗಿತ್ತು.

ನವೀಕರಣ ಕೊಡುವ ಕುರಿತು ವರದಿ: ಕೆರೆಯಂಗಳದಲ್ಲಿ ನಿರ್ವಣವಾದ ಲುಂಬಿನಿ ಗಾರ್ಡನ್ ನಿರ್ವಹಣೆ, ಸ್ವಚ್ಛತೆ, ಸಾಮಾನ್ಯ ಜನರಿಗೂ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಲುಂಬಿನಿ ಗಾರ್ಡನ್ ಗುತ್ತಿಗೆದಾರರು ವಿಫಲವಾಗಿದ್ದು,

ಮರಳಿ ಗುತ್ತಿಗೆ ನೀಡದಂತೆ ಪರಿಸರ ಎನ್ವಿರಾನ್​ವೆುಂಟ್ ಸಪೋರ್ಟ್ ಗ್ರೂಪ್ ವರದಿ ನೀಡಿತ್ತು. ವರದಿ ಆಧರಿಸಿ ತೀರ್ಪು ನೀಡಿದ ಹೈಕೋರ್ಟ್ ಕೆರೆಯನ್ನು ಮತ್ತೊಮ್ಮೆ ಗುತ್ತಿಗೆ ನೀಡದಂತೆ ಆದೇಶ ಹೊರಡಿಸಿತ್ತು. ಇದರ ಫಲವಾಗಿ ಲುಂಬಿನಿ ಗಾರ್ಡನ್ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ತೆರೆದುಕೊಂಡಿದೆ.

ಗುತ್ತಿಗೆ ನವೀಕರಣಕ್ಕೆ ಸ್ಥಳೀಯರ ವಿರೋಧ: ಲುಂಬಿನ ಗಾರ್ಡನ್​ನಲ್ಲಿ ಪ್ರತಿ ವ್ಯಕ್ತಿಯ ಪ್ರವೇಶಕ್ಕೆ 50 ರೂ. ಬೋಟಿಂಗ್ 50 ರೂ. ಕ್ಯಾಮರಾ ಬಳಕೆಗೆ 30 ರೂ. ಹಾಗೂ ಕೃತಕ ಅಲೆಯೊಂದಿಗೆ ಆಟವಾಡಲು 200 ರೂ. ದರ ನಿಗದಿ ಮಾಡಿತ್ತು. ನಮ್ಮ ಸುತ್ತಲೂ ಇರುವ ಗಾಳಿ, ನೀರು, ಬೆಟ್ಟಗುಡ್ಡಗಳು ಸಾರ್ವಜನಿಕರ ಸ್ವತ್ತಾಗಿದ್ದು, ಕೆರೆಯಂಗಳ ಪ್ರವೇಶಕ್ಕೆ ಹಣ ನಿಗದಿ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ಮತ್ತೊಮ್ಮೆ 10 ವರ್ಷಗಳ ಗುತ್ತಿಗೆ ನವೀಕರಣಕ್ಕೆ ಲುಂಬಿನಿ ಗಾರ್ಡನ್​ನ ಗುತ್ತಿಗೆದಾರ ಅರ್ಜಿ ಸಲ್ಲಿಸಿದ್ದು, ಗುತ್ತಿಗೆ ನೀಡದಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಕೆರೆಯ ಸ್ವಾತಂತ್ರ್ಯಆಚರಣೆಗೆ ಸಿದ್ಧತೆ

ಕಳೆದ 2004 ರಿಂದ 2019ನೇ ಸಾಲಿನ ನ.27 ವರೆಗೆ ಗುತ್ತಿಗೆ ಪಡೆದುಕೊಂಡಿದ್ದ ಸಂಸ್ಥೆ ಸಾರ್ವಜನಿಕ ಆಸ್ತಿಯನ್ನು ವಾಣಿಜ್ಯಾತ್ಮಕವಾಗಿ ಬಳಸಿಕೊಂಡಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಕೆರೆ ಆವರಣ ಪ್ರವೇಶ ನಿರ್ಬಂಧವಿತ್ತು. ಈಗ ಅರಣ್ಯ ಇಲಾಖೆ ಸುಪರ್ದಿಗೆ ಕೆರೆ ನಿರ್ವಹಣೆ ಬಂದಿದ್ದು, ಸ್ಥಳೀಯರಿಗೆ ಪ್ರವೇಶಕ್ಕೆ ಮುಕ್ತವಾಗಿದೆ. ಹೀಗಾಗಿ ಇಲ್ಲಿನ ಸ್ಥಳೀಯರು ನಾಗವಾರ ಕೆರೆಯ ಸ್ವಾತಂತ್ರ ಆಚರಿಸಲು ಮುಂದಾಗಿದ್ದಾರೆ.

ಕೆರೆಯನ್ನು ಅರಣ್ಯ ಇಲಾಖೆ ಸುಪರ್ದಿಗೆ ಪಡೆಯಲಾಗಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಆದರೆ ಇಲ್ಲಿರುವ ಬೋಟ್ ಸೇರಿ ಎಲ್ಲ ಮನರಂಜನಾ ಪರಿಕರಗಳ ನಿರ್ವಹಣೆ ಕುರಿತು ಉನ್ನತ ಅಧಿಕಾರಿಗಳೊಂದಿಗೆ ರ್ಚಚಿಸಿ ಕ್ರಮ ಕೈಗೊಳ್ಳಲಾಗುವುದು.

| ರಮೇಶ್ ಯಲಹಂಕ ಆರ್​ಎಫ್​ಒ

ಕೆರೆ ನಿರ್ವಹಣೆಯನ್ನು ಖಾಸಗಿಯರಿಗೆ ಕೊಡದೆ ಸ್ಥಳೀಯರಿಂದಲೇ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಬೇಕು. ಇಲ್ಲಿನ ಸ್ಥಳೀಯರು ಫ್ರೆಂಡ್ಸ್ ಆಫ್ ಲೇಕ್ಸ್ ಸಂಘವನ್ನು ಕಟ್ಟಿಕೊಂಡು ಕೆರೆಯ ಒತ್ತುವರಿ, ನೀರು ಕಲುಷಿತವಾಗದಂತೆ ನೋಡಿಕೊಳ್ಳುತ್ತೇವೆ.

| ಬಿ.ವಿ. ರಾಮಪ್ರಸಾದ್ ಫ್ರೆಂಡ್ಸ್ ಆಫ್ ಲೇಕ್ಸ್ ಸಹಸಂಸ್ಥಾಪಕ

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...