More

    ವಿಶೇಷ ಶಿಕ್ಷಕರಿಗೆ ಗೌರವಧನ ಹೆಚ್ಚಿಸಿ

    ಬೆಳಗಾವಿ: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶೇಷ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಬುಧವಾರ ಸಾಂಕೇತಿಕವಾಗಿ ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    1982ರ ಅನುದಾನ ನೀತಿ ಸಂಹಿತೆ ಪ್ರಕಾರ ರಾಜ್ಯದ 32 ಸಂಸ್ಥೆಗಳಿಗೆ ಮಾತ್ರ ಅನುದಾನ ದೊರಕಿದೆ. ಬಳಿಕ ಬೇರೆ ಯಾವುದೇ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ, ಪೋತ್ಸಾಹಧನ ಸಿಕ್ಕಿಲ್ಲ. ವಿಶೇಷ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ನಿರಂತರ ಪ್ರತಿಭಟನೆ ನಡೆಸಿದ ಬಳಿಕ ಅನುದಾನ ಮಂಜೂರು ಮಾಡಲಾಗಿದೆ. ಆದರೆ, 2014ರಿಂದ ವಿಶೇಷ ಶಿಕ್ಷಕರಿಗೆ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಗೌರವಧನ ಏರಿಕೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಡಿ ಸುಮಾರು 141 ವಿಶೇಷ ಶಾಲೆಗಳು ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುದಾನ ಪಡೆದುಕೊಳ್ಳುತ್ತಿವೆ. ಆದರೆ, ವಿಶೇಷ ಶಿಕ್ಷಕರಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಸಿಗುತ್ತಿಲ್ಲ.

    25 ವರ್ಷ ಮೇಲ್ಪಟ್ಟ ಅಂಗವಿಕಲ ವಯಸ್ಕರಿಗೆ ಸಂಬಂಧಿತ ಇಲಾಖೆಯಿಂದ ಯಾವುದೇ ತರಬೇತಿ, ಪುನರ್ವಸತಿ ಕಾರ್ಯಕ್ರಮ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವರ್ಷದ ಅಂತ್ಯದ ಒಳಗಾಗಿ ವಿಶೇಷ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರಿಗೆ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಗೌರವಧನ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಎಸ್.ಎಸ್.ಶಿಂಧೆ, ಎಸ್.ಎನ್.ಶಿಂಧೆ, ಜಿ.ಐ.ಹಿರೇಮಠ, ಎಚ್.ಎಸ್.ಜಗದಾಳ, ಬಿ.ಬಿ.ಗಂಡಿ, ಶಿವಕುಮಾರ ಕಾಟೆ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts