More

  ಎಚ್.ಡಿ.ದೇವೇಗೌಡರ ಹೆಸರಲ್ಲಿ ವಿಶೇಷ ಪೂಜೆ

  ಶಿವಮೊಗ್ಗ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನ್ಮದಿನವನ್ನು ಜೆಡಿಎಸ್ ಕಾರ್ಯಕರ್ತರು ವಿವಿಧೆಡೆ ಆಚರಿಸಿದರು. ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ದೇವೇಗೌಡರ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

  ಬಳಿಕ ಜಿಲ್ಲಾ ಯುವ ಜನತಾ ದಳ ಪಕ್ಷದಿಂದ ದೇವೇಗೌಡ ಅವರ ಜನ್ಮದಿನವನ್ನು ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
  ಯುವ ಜನತಾ ದಳದ ಜಿಲ್ಲಾಧ್ಯಕ್ಷ ಮಧುಕುಮಾರ್, ಕಾರ್ಯಾಧ್ಯಕ್ಷ ಎಸ್.ಎಲ್.ನಿಖಿಲ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಪ್ರಧಾನ ಕಾರ್ಯದರ್ಶಿ ಸಂಗಯ್ಯ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಹಮ್ಮದ್ ಯೂಸುಫ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ನಗರಾಧ್ಯಕ್ಷ ದೀಪಕ್ ಸಿಂಗ್, ನಗರ ಮಹಾ ಪ್ರಧಾನ ಕಾರ್ಯದರ್ಶಿ ವಿನಯ್, ಪ್ರಧಾನ ಕಾರ್ಯದರ್ಶಿ ಗೋವಿಂದ್‌ರಾಜ್, ಗೋಪಿ, ಲೋಹಿತ್, ಮಾಧವ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

  See also  ಬೇಡ್ತಿ-ವರದಾ ನದಿ ಜೋಡಣೆ ಕಾಮಗಾರಿ ಆರಂಭಕ್ಕೆ ಮುಂದಾಗಲಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts