ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ

15 SRS MARIKAMBA
Published on

ಶಿರಸಿ: ನವಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಭಾನುವಾರದಿಂದ ನವರಾತ್ರಿ ಉತ್ಸವ ಪ್ರಾರಂಭ ವಾಗಿದ್ದು ಭಕ್ತರ ದಂಡು ದೇವಸ್ಥಾನದತ್ತ ಹರಿದು ಬರುತ್ತಿದೆ. ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ 9 ದಿನ ಶ್ರೀದೇವಿಗೆ ವಿಶೇಷ ಪೂಜೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನವರಾತ್ರಿಯ ಮೊದಲ ದಿನವಾದ ಭಾನುವಾರ ದೇವಸ್ಥಾನದ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶೈಲಪುತ್ರಿ ಅಲಂಕಾರದಲ್ಲಿ ವಿರಾಜಮಾನವಾಗಿ ಕುಳಿತ ಮಾರಿಕಾಂಬಾ ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net