More

    ಬಸವೇಶ್ವರಸ್ವಾಮಿಗೆ ವಿಶೇಷ ಪೂಜೆ

    ಹಿರೀಸಾವೆ : ಹೋಬಳಿಯ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರ ಕಬ್ಬಳಿ ಶ್ರೀಬಸವೇಶ್ವರಸ್ವಾಮಿ ಸನ್ನಿಧಿಯಲ್ಲಿ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಅಭಿಷೇಕ ಹಾಗೂ ಪೂಜಾ ಕೈಂಕರ್ಯ ಜರುಗಿದ್ದು ದೇವಸ್ಥಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿತ್ತು.

    ಬೆಳಗ್ಗೆ 8.30 ರಲ್ಲಿ ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಬಸವೇಶ್ವರಸ್ವಾಮಿಗೆ ಪ್ರಥಮ ಪೂಜೆ ಸಲ್ಲಿಸಿದರು. ಮೊದಲಿಗೆ ಏಕವಾರು ಅಭಿಷೇಕ, ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಕುಂಕುಮಾರ್ಚನೆ, ಒಡವೆ-ವಸ್ತ್ರಗಳ ಅಲಂಕಾರದ ಬಳಿಕ ಪೂಜಾ ಕೈಂಕರ್ಯಗಳು ನೆರವೇರಿದವು.

    ಮುಂಜಾನೆಯಿಂದಲೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಸಮೂಹ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಬಸವೇಶ್ವರಸ್ವಾಮಿ ದರ್ಶನ ಪಡೆದರು.
    ಸನ್ನಿಧಿಯ ಆವರಣದಲ್ಲಿರುವ ನಾಗದೇವತೆಗಳಿಗೆ ಮಹಿಳೆಯರು ಪೂಜೆ ಸಲ್ಲಿಸಿ ಬಸವ ಮೂರ್ತಿಗೆ ಕ್ಷೀರಾಭಿಷೇಕ ಮಾಡಿದರು. ಬೆಂಗಳೂರು, ಮೈಸೂರು, ಮಂಡ್ಯ, ನಾಗಮಂಗಲ, ತುಮಕೂರು ಹಾಗೂ ತಿಪಟೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಸ್ವಾಮಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದರು. ಸುತ್ತಮುತ್ತಲ ಗ್ರಾಮದ ರೈತರು ತಮ್ಮ ಜಾನುವಾರುಗಳನ್ನು ಕರೆತಂದು ದೇಗುಲದ ಸುತ್ತ ಪ್ರದಕ್ಷಿಣೆ ಬಂದ ಬಳಿಕ ತೀರ್ಥ ಪ್ರೋಕ್ಷಣೆ ಹಾಕಿಸಿದರು.

    ಶ್ರೀಕ್ಷೇತ್ರ ಕಬ್ಬಳಿ ಶಾಖಾಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಗುಡಿಗೌಡ ಪ್ರಕಾಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts