ಯುವಶಕ್ತಿಯ ಕೈಯಲ್ಲಿ ದೇಶದ ಭವಿಷ್ಯ : ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.ಅಭಿಪ್ರಾಯ

yuvavahini
ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ನಾರಾಯಣ ಗುರು ಚಿಂತನೆಯ ಕುರಿತ ಭಾಷಣ ಸ್ಪರ್ಧೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಯುವವಾಹಿನಿ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಮತ್ತಿತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ದೇಶದ ಭವಿಷ್ಯ ಯುವಶಕ್ತಿಯ ಕೈಯಲ್ಲಿದೆ. ಯುವ ಮನಸ್ಸುಗಳಿಗೆ ಸರಿಯಾದ ದಾರಿ ಮತ್ತು ಮಾರ್ಗದರ್ಶನ ನೀಡಿದರೆ ಅವರೇ ಆಸ್ತಿಯಾಗುತ್ತಾರೆ. ಎಲ್ಲ ಧರ್ಮಗಳಿಗಿಂತಲೂ ಮಾನವ ಧರ್ಮವೇ ಶ್ರೇಷ್ಠವಾದದ್ದು. ವ್ಯಕ್ತಿ ಗೌರವ, ಸ್ನೇಹ, ವಿಶ್ವಾಸದ ಒಳ್ಳೆಯ ನಡೆನುಡಿಯ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.ಅಭಿಪ್ರಾಯಪಟ್ಟರು.

ದ.ಕ.ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕದ ಸಹಯೋಗದಲ್ಲಿ ಬಿ.ಸಿ.ರೋಡಿನ ನಾರಾಯಣಗುರು ಸಭಾಭವನದಲ್ಲಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ನಾರಾಯಣ ಗುರು ಚಿಂತನೆಯ ಕುರಿತ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿ, ನಾರಾಯಣ ಗುರುಗಳು ಒಂದೇ ಜಾತಿಗೆ ಸೀಮಿತರಾದವರಲ್ಲ. ನಾರಾಯಣ ಗುರುಗಳ ಚಿಂತನೆ ಇಂದಿಗೂ ಪ್ರಸ್ತುತವಾದದ್ದು. ಯುವ ಜನತೆಗೆ ನಾರಾಯಣ ಗುರುಗಳ ಚಿಂತನೆಯನ್ನು ಮುಟ್ಟಿಸುವ ಕೆಲಸ ಅಗತ್ಯ ಎಂದರು.

ಯುವವಾಹಿನಿ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಮೋಹನ್ ಮಾಡೂರು ಶುಭಾಶಯ ಕೋರಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸಂಘದ ಕಾರ್ಯದರ್ಶಿ ರಮೇಶ್ ಎಂ.ತುಂಬೆ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ವಿದ್ಯಾರ್ಥಿ ಸಂಘಟನೆ ನಿರ್ದೇಶಕ ಬ್ರಿಜೇಶ್ ಕಂಜತ್ತೂರು ಉಪಸ್ಥಿತರಿದ್ದರು. ಉಪಾಧ್ಯಕ್ಷ ನಾಗೇಶ್ ನೈಬೇಲು ಸ್ವಾಗತಿಸಿದರು. ಕಾರ್ಯದರ್ಶಿ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net