ಅಗಲಿದ ನಡೆದಾಡುವ ದೇವರಿಗೆ ಶ್ರದ್ಧಾಂಜಲಿ

ಜಗಳೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ ಪಟ್ಟಣ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿತು.

ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೇಣದ ಬತ್ತಿ ಹಚ್ಚಿ, ಕೆಲ ನಿಮಿಷ ಮೌನಾಚರಣೆ ಮಾಡಲಾಯಿತು.

ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಎಂ.ಎಸ್. ಪಾಟೀಲ್ ಮಾತನಾಡಿ, ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಉಪನ್ಯಾಸಕ ರಾಜಪ್ಪ, ನಿವೃತ್ತ ಉಪನ್ಯಾಸಕ ತಿಮ್ಮರಾಜ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಜೆ.ಎನ್. ಶಿವನಗೌಡ, ಕಸಾಪ ಅಧ್ಯಕ್ಷ ಹಜರತ್‌ಅಲಿ, ಎಪಿಎಂಸಿ ಸದಸ್ಯ ಎನ್.ಎಸ್. ರಾಜು, ಪಪಂ ಸದಸ್ಯರಾದ ರಮೇಶ್, ರವಿಕುಮಾರ್ ಇತರರಿದ್ದರು.