

ಕೊಡಗು: ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತವೊಂದು ವಿಡಿಯೋದಲ್ಲಿ ಸೆರೆಯಾಗಿದ್ದು, ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಡಿಕೇರಿಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಮಡಿಕೇರಿ ತಾಲೂಕಿನ ಮದೆನಾಡು ನಿವಾಸಿ ಬಿ.ಎಸ್.ಧನಂಜಯ (53) ಸಾವಿಗೀಡಾದ ಸವಾರ. ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಇವರು ಕಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಎದುರಿನ ರಸ್ತೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಸಾಗುತ್ತಿದ್ದರು. ಅದೇ ವೇಳೆಗೆ ಎದುರಿನ ತಿರುವಿನಲ್ಲಿ ವೇಗವಾಗಿ ಬಂದ ದ್ವಿಚಕ್ರವಾಹನ ಕಾರಿಗೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಧನಂಜಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಡಿಕೇರಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.