More

    ವೇಗವಾಗಿ ಬಂದು ರಸ್ತೆ ಬದಿ ನಿಂತಿದ್ದ ಮಹಿಳೆಗೆ ಗುದ್ದಿದ; ಅಪಘಾತದ ವಿಡಿಯೋ ವೈರಲ್​

    ದಕ್ಷಿಣ ಕನ್ನಡ: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

    ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಗಾಯಾಳು ಮಹಿಳೆಯನ್ನು ಅಂಜಲಿ ಶೆಣೈ ಎಂದು ಗುರುತಿಸಲಾಗಿದೆ. ಆರೋಪಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ಧಾನೆ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ: ಕೊಳಲನೂದುತ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಿಸುತ್ತಿರುವ ಬಾಲಕ; ವಿಡಿಯೋ ವೈರಲ್

    ವೈರಲ್​ ಆಗಿರುವ ವಿಡಿಯೋದಲ್ಲಿ ವೇಗವಾಗಿ ಬರುವ ವ್ಯಾಗನರ್​ ಕಾರೊಂದು ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರು ಹಾಗೂ ಮಹಿಳೆಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ಬೀಳುತ್ತಾರೆ. ಜೋರಾದ ಶಬ್ದ ಕೇಳಿಸಿಕೊಂಡು ಕೂಡಲೇ ಸ್ಥಳೀಯರು ಮಹಿಳೆಯ ನೆರವಿಗೆ ಧಾವಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಅಪಘಾತದ ಬಳಿಕ ಕಾರಿನ ಸಮೇತ ಪರಾರಿಯಾಗಿದ್ದ ಆರೋಪಿ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts