More

    VIDEO| ಅಂತ್ಯಸಂಸ್ಕಾರ ಮುಗಿಸಿ ವಾಪಸ್​ ಆಗುವ ವೇಳೆ ಅಪಘಾತ; ದಂಪತಿ ಮೃತ್ಯು

    ಹೈದರಾಬಾದ್: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾವನ್ನು ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ದಂಪತಿಗಳಿಬ್ಬರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.

    ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಕಾರು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಇದನ್ನೂ ಓದಿ: ಆತ್ಮಾಹುತಿ ಬಾಂಬ್​ ದಾಳಿ; ಇದರ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ ಪಾಕ್​

    ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಸೆಪ್ಟೆಂಬರ್​ 27ರಂದು ಘಟನೆ ನಡೆದಿದ್ದು, ಸಂತೋಷ್​ ಎಂಬುವವರು ತಮ್ಮ ತಾತನವರ ಅಂತ್ಯಸಂಸ್ಕಾರವನ್ನು ಮುಗಿಸಿ ಹೈದರಾಬಾದ್​ನತ್ತ ತೆರಳುತ್ತಿದ್ದರು. ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಖಮ್ಮಂ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

    ಕಾರನ್ನು ಚಲಾಯಿಸುತ್ತಿದ್ದ ಸಂತೋಷ್​ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದಿನಲ್ಲಿ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts