ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 94ಸಿ ಹಾಗೂ ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ ಎಲ್ಲ ಫಲಾನುಭವಿಗಳಿಗೆ ಶೀಘ್ರವಾಗಿ ಮಂಜೂರಾತಿ ನೀಡುವಂತೆ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಂದಾಪುರ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ, 94ಸಿಯಲ್ಲಿ ಅರ್ಜಿ ನೀಡಿದವರಿಗೆ ಹಾಗೂ ಅಕ್ರಮ ಸಕ್ರಮದಡಿ ಅರ್ಜಿ ನೀಡಿ ಹಲವು ವರ್ಷಗಳಿಂದ ಬಾಕಿ ಇರುವ ಎಲ್ಲ ಅರ್ಹ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ನೀಡಲು ಸ್ಥಳ ಪರಿಶೀಲನೆ ನಡೆಸಿ ಹಕ್ಕುಪತ್ರ ನೀಡಬೇಕು. ಗ್ರಾಮ ಆಡಳಿತ ಅಧಿಕಾರಿ ಈ ಬಗ್ಗೆ ತುರ್ತಾಗಿ ಕ್ರಮ ವಹಿಸುವಂತೆ ಸೂಚಿಸಿದರು.
ಕುಂದಾಪುರ ತಹಸೀಲ್ದಾರ್ ಮಲ್ಲಿಕಾರ್ಜುನ, ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್, ಹೆಬ್ರಿ ತಹಸೀಲ್ದಾರ್ ಪ್ರಸಾದ್ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು, ಸರ್ವೇ ಎಡಿಎಲ್‌ಆರ್, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.